ಕಾಂಗ್ರೆಸ್ ಪಕ್ಷದ ಚುನಾವಣಾ ಘೋಷಣೆಯನ್ನು ಆಕ್ಷೇಪಿಸಿರುವ ಅವರು, ‘ಕಾಂಗ್ರೆಸ್ ಪಕ್ಷವು ಲಡ್ಕಿ ಹೂಂ, ಲಡ್ ಸಕ್ತಿ ಹೂಂ’ (ನಾವು ಹುಡುಗಿಯರು, ಹೋರಾಡಬಲ್ಲೆವು) ಎಂಬ ಘೋಷಣೆ ಮೊಳಗಿಸಿದೆ. ಆದರೆ ಮಹಿಳೆಯರ ರಕ್ಷಣೆಗಾಗಿ ಯಾವುದೇ ಕೆಲಸ ಮಾಡಿಲ್ಲ ಎಂದು ಹೇಳಿದರು. ಮಹಿಳಾ ಸ್ವಾವಲಂಬನೆ ಮತ್ತು ಸುರಕ್ಷೆ ಬಗ್ಗೆ ಬಿಜೆಪಿಯು ಸಾಕಷ್ಟು ಕೆಲಸ ಮಾಡಿದೆ ಎಂದು ಅವರು ನುಡಿದರು. ‘ನನ್ನ ಮಾವ 15 ದಿನಗಳ ಹಿಂದೆ ಕಾಂಗ್ರೆಸ್ಗೆ ಬಂದಿರಬಹುದು. ಆದರೆ ನಾನು ಮೊದಲಿನಿಂದಲೂ ಬಿಜೆಪಿಯನ್ನೇ ಬೆಂಬಲಿಸುತ್ತಿದ್ದೇವೆ. ಏಕೆಂದರೆ ಬಿಜೆಪಿಯು ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿದೆ’ ಎಂದು ಹೇಳಿದರು.
ಸಮಾಜ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ರ ಸೊಸೆ ಅಪರ್ಣಾ ಯಾದವ್ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದಾದ ಕೆಲವೇ ದಿನಗಳಲ್ಲಿ ನಿದಾ ಖಾನ್ ಸಹ ಬಿಜೆಪಿಗೆ ಸೇರಿದ್ದಾರೆ. 403 ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಹೊರಬೀಳಲಿದೆ. ಫೆಬ್ರವರಿ 10ರಂದು ಮೊದಲ ಹಂತದ ಮತದಾನ ಫೆಬ್ರವರಿ 14ರಂದು 2ನೇ ಹಂತದ ಮತದಾನ ಫೆಬ್ರವರಿ 20ರಂದು 3ನೇ ಹಂತದ ಮತದಾನ ಫೆಬ್ರವರಿ 23ರಂದು 4ನೇ ಹಂತದ ಮತದಾನ ಫೆಬ್ರವರಿ 27ರಂದು 5ನೇ ಹಂತದ ಮತದಾನ ಮಾರ್ಚ್ 3ರಂದು 6ನೇ ಹಂತದ ಮತದಾನ ಮಾರ್ಚ್ 7ರಂದು 7ನೇ ಹಂತದ ಮತದಾನ ನಡೆಯಲಿದೆ.
ಇದನ್ನೂ ಓದಿ: UP Diwas 2022: ಉತ್ತರ ಪ್ರದೇಶ ಜನರಿಗೆ ರಾಷ್ಟ್ರಪತಿ, ಗೃಹ ಸಚಿವರಿಂದ ಶುಭಾಶಯ; ಸಿಎಂ ಯೋಗಿ ವಿಡಿಯೋ ಶೇರ್ ಮಾಡಿದ ಪ್ರಧಾನಿ ಮೋದಿ
ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಮೊದಲ ಟಿಕೆಟ್ ನೀಡಿದ ಬಿಜೆಪಿಯ ಮಿತ್ರ ಪಕ್ಷ ಅಪ್ನಾದಳ್