ಉತ್ತರಾಖಂಡ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ; ಮಾಜಿ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಪಕ್ಷದಿಂದ ಉಚ್ಛಾಟನೆ

ಉತ್ತರಾಖಂಡ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ; ಮಾಜಿ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಪಕ್ಷದಿಂದ ಉಚ್ಛಾಟನೆ
ಕಾಂಗ್ರೆಸ್​ನಿಂದ ಉಚ್ಛಾಟನೆಗೊಂಡ ಕಿಶೋರ್ ಉಪಾಧ್ಯಾಯ

Uttarakhand Assemblu Elections: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಉತ್ತರಾಖಂಡ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಉಪಾಧ್ಯಾಯ ಬಿಜೆಪಿ ಮೂಲಕ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

TV9kannada Web Team

| Edited By: shivaprasad.hs

Jan 27, 2022 | 12:19 PM

ಉತ್ತರಾಖಂಡದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ (Kishore Upadhyay) ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಕಾಂಗ್ರೆಸ್ ಪಕ್ಷವು (Congress) ಬುಧವಾರ ಉಚ್ಚಾಟಿಸಿ ಆದೇಶ ಹೊರಡಿಸಿದೆ. ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ. ಈ ಹಿಂದೆ ಶಿಸ್ತುಕ್ರಮದ ಹಿನ್ನೆಲೆಯಲ್ಲಿ ಉಪಾಧ್ಯಾಯ ಅವರನ್ನು ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿತ್ತು. ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟಿಸಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ) ಜನವರಿ 26 ರಂದು ಬರೆದ ಪತ್ರದಲ್ಲಿ ‘‘ಹಲವಾರು ಎಚ್ಚರಿಕೆಗಳ ಹೊರತಾಗಿಯೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರಣ, ತಕ್ಷಣವೇ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಗಿದೆ’’ ಎಂದು ತಿಳಿಸಲಾಗಿದೆ. ಮೂಲಗಳ ಪ್ರಕಾರ ಕಿಶೋರ್ ಉಪಾಧ್ಯಾಯ ಶೀಘ್ರದಲ್ಲೇ ಬಿಜೆಪಿ (BJP) ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.

ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಬುಧವಾರ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಉಪಾಧ್ಯಾಯ ಹೆಸರಿರಲಿಲ್ಲ. ಇದರಿಂದ ಕಾಂಗ್ರೆಸ್‌ನಲ್ಲಿ ಉಪಾಧ್ಯಾಯ ಅವರ ಭವಿಷ್ಯದ ಬಗ್ಗೆ ಊಹಾಪೋಹಗಳು ಹಬ್ಬಿದ್ದವು. ಇದೀಗ ಆರು ವರ್ಷಗಳ ಕಾಲ ಪಕ್ಷದಿಂದಲೇ ಉಚ್ಛಾಟಿಸಲಾಗಿದೆ. ಶಿಸ್ತು ಕ್ರಮವಾಗಿ ಇತ್ತೀಚೆಗೆ ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲ್ಪಟ್ಟಿದ್ದ ಉಪಾಧ್ಯಾಯ ಅವರು, ಅಮಾನತು ಹಿಂಪಡೆಯಲು ಬಯಸಿದ್ದರು ಎಂದು ಅವರ ಆಪ್ತರನ್ನು ಉಲ್ಲೇಖಿಸಿ ಎಎನ್​ಐ ವರದಿ ಮಾಡಿದೆ.

ಎಎನ್​ಐ ಟ್ವೀಟ್ ಇಲ್ಲಿದೆ:

ಬಿಜೆಪಿಯಿಂದ ತೆಹ್ರಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರಾ ಕಿಶೋರ್? ಕೆಲವು ವರದಿಗಳ ಪ್ರಕಾರ ಕಿಶೋರ್ ಉಪಾಧ್ಯಾಯ ಅವರು ತೆಹ್ರಿ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ನಡುವೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಹರಿಶ್ ಸಿಂಗ್ ರಾವತ್ ಅವರನ್ನು ಲಾಲ್​ಕುವಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ. ಅವರು ಸ್ಪರ್ಧಿಸುತ್ತಿದ್ದ ರಾಮ್​ನಗರದಲ್ಲಿ ಮಹೇಂದರ್ ಪಾಲ್ ಸಿಂಗ್ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ:

 ಫಾಲೋವರ್​ಗಳನ್ನು ಸೀಮಿತಗೊಳಿಸಲಾಗುತ್ತಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ನಿರಾಕರಿಸಿದ ಟ್ವಿಟರ್; ಇಲ್ಲಿದೆ ಪೂರ್ಣ ಮಾಹಿತಿ

ಟಿಪ್ಪು ಸುಲ್ತಾನ್ ಬಗ್ಗೆ ನಮಗೆ ಗೊತ್ತಿದೆ, ಬಿಜೆಪಿಯಿಂದ ಕಲಿಯಬೇಕಾಗಿಲ್ಲ: ಸಂಜಯ್ ರಾವತ್

Follow us on

Related Stories

Most Read Stories

Click on your DTH Provider to Add TV9 Kannada