
ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಇಡೀ ದೇಶದ ಗಮನ ಸೆಳೆದಿದ್ದು, ಈಗಾಗಲೇ ಪಶ್ಚಿಮಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಪಶ್ಚಿಮಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಮತದಾನ ಆರಂಭವಾಗಿದ್ದು, ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ, ಕೇರಳದ 140 ವಿಧಾನಸಭಾ ಕ್ಷೇತ್ರಗಳಲ್ಲಿ, ಪಶ್ಚಿಮಬಂಗಾಳದ 3 ಜಿಲ್ಲೆಗಳ 31 ಕ್ಷೇತ್ರಗಳಲ್ಲಿ ಹಾಗೂ ಪುದುಚೇರಿಯ 30 ವಿಧಾನ ಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಈ ಎಲ್ಲಾ ಕಡೆಗಳಿಂದ ಒಟ್ಟು 20 ಕೋಟಿಗೂ ಅಧಿಕ ಜನ ಇಂದು ಮತ ಚಲಾಯಿಸುತ್ತಿದ್ದಾರೆ ಎನ್ನುವುದು ಗಮನಾರ್ಹ.
ಕೇರಳ ರಾಜ್ಯದಲ್ಲಿ ಚುನಾವಣೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಇಲ್ಲಿಯ ತನಕ ಶೇಕಡಾ 15.52ರಷ್ಟು ಮತದಾನ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಮೂಡಿಸಿದ್ದು, 88,937 ಪೋಲಿಂಗ್ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಚುನಾವಣಾ ಕರ್ತವ್ಯಕ್ಕಾಗಿ 4.17 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, 1,58,263 ಮಂದಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ತಮಿಳುನಾಡಿನಲ್ಲಿ ಒಟ್ಟು 6.28 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಮತದಾನ ಕೇಂದ್ರಗಳಲ್ಲಿ ಕೊರೊನಾ ನಿಯಮಾವಳಿಗಳನ್ನು ಪಾಲನೆ ಮಾಡಲಾಗುತ್ತಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ಮತ ಚಲಾಯಿಸಲು ಬರುವಂತೆ ನೋಡಿಕೊಳ್ಳಲಾಗುತ್ತಿದೆ.
ಪಶ್ಚಿಮ ಬಂಗಾಳದಲ್ಲಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಮತದಾನ ಕೇಂದ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.
Published On - 10:26 am, Tue, 6 April 21