ಚುನಾವಣೆ ವೇಳೆ ಜಪ್ತಿ ಮಾಡಲಾಗುವ ಹಣ, ಒಡವೆ, ಮದ್ಯ ಎಲ್ಲಿಗೆ ಹೋಗುತ್ತೆ?
ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ದೊಡ್ಡ ಮೊತ್ತದ ಹಣವನ್ನು ವಾಹನಗಳಲ್ಲಿ ತೆಗೆದುಕೊಂಡು ಹೋಗಲು ಆಗುವುದಿಲ್ಲ. ಹೈವೇಗಳಲ್ಲಿ, ಗಡಿ ಭಾಗದಲ್ಲಿ, ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿ ತಪಾಸಣೆ ಮಾಡಲಾಗುತ್ತಿರುತ್ತದೆ. ಮದುವೆಗೆ ಹೋಗುತ್ತಿದ್ದೇವೆ, ಆಸ್ಪತ್ರೆಯಲ್ಲಿ ಆಪರೇಷನ್ ಇದೆ. ಹೀಗಾಗಿ ಹಣ ತೆಗೆದುಕೊಂಡು ಹೋಗುತ್ತಿದ್ದೀವಿ ಎಂದರೂ ಅಧಿಕಾರಿಗಳು ಬಿಡುವುದಿಲ್ಲ. ಹಣ ನಿಮ್ಮದು ಎನ್ನಲು ಪುರಾವೆ ನೀಡಿ ಎನ್ನುತ್ತಾರೆ. ಈ ರೀತಿ ಚುನಾವಣೆ ವೇಳೆ ಜಪ್ತಿ ಮಾಡಲಾಗುವ ಹಣ, ನಗದು, ಮದ್ಯವನ್ನು ಏನು ಮಾಡಲಾಗುತ್ತೆ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಿದರೆ, ಅದಕ್ಕೆ ಉತ್ತರ ಇಲ್ಲಿದೆ.

ಇಡೀ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ 2024 ಕದನ ರಂಗೇರಿದೆ. ಇದೇ ಏಪ್ರಿಲ್ 26ರಿಂದ ಜೂನ್ 04ರ ವರೆಗೆ ದೇಶದಲ್ಲಿ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಹಾಗೂ ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಘೋಷಣೆಯಾದ ದಿನವೇ ಅಂದರೆ ಮಾರ್ಚ್ 16ರ ಸಂಜೆಯಿಂದಲೇ ದೇಶದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು ಭದ್ರತಾ ಪಡೆಗಳು ನಿರಂತರ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಿ ಹದ್ದಿನ ಕಣ್ಣಿಟ್ಟಿದ್ದಾರೆ. ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ತಪಾಸಣೆ ನಡೆಯುತ್ತಿದೆ. ಹೈವೇಗಳಲ್ಲಿ ಸಾಗುವ ಪ್ರತಿಯೊಂದು ಬೈಕು, ಕಾರು, ಬಸ್, ಲಾರಿ ಸೇರಿದಂತೆ ವಾಹನಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಈ ರೀತಿ ತಪಾಸಣೆ ಮಾಡುವಾಗ ವಶಪಡಿಸಿಕೊಳ್ಳಲಾಗುವ ಹಣ, ಒಡವೆ ಮತ್ತು ಮದ್ಯವನ್ನು ಚುನಾವಣಾ ಆಯೋಗ ಮತ್ತು ಪೊಲೀಸರು ಏನು ಮಾಡುತ್ತಾರೆ ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡುವುದು ಸಹಜ. ಅದಕ್ಕೆ ಸಂಪೂರ್ಣ ಉತ್ತರ ಇಲ್ಲಿದೆ. ಒಬ್ಬ ಅಭ್ಯರ್ಥಿಯ ಚುನಾವಣಾ ಖರ್ಚು ಎಷ್ಟು? ಚುನಾವಣೆ ಬಂತೆಂದರೆ ಸಾಕು ಹಣದ ಹೊಳೆಯೇ ಹರಿಯುತ್ತೆ. ವಿಧಾನಸಭೆ ಚುನಾವಣೆಯೇ ಆಗಲಿ, ಲೋಕಸಭಾ ಚುನಾವಣೆಯೇ ಆಗಲಿ, ಯಾವುದಕ್ಕೂ ಭೇದ ಭಾವ ಇಲ್ಲದೆ ಚುನಾವಣಾ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಾರೆ. ಇದು ನಮಗೆಲ್ಲಾ ತಿಳಿದಿರುವ ವಿಷಯ. ಜೊತೆಗೆ ಮತದಾರರಿಗೆ ಈ ರೀತಿ ಹಣ, ಹೆಂಡ ಕೊಡುವ ವಿಷಯದಲ್ಲಿ ಇಡೀ ಭಾರತದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಚುನಾವಣೆ ಆಯೋಗದ ನಿಯಮವನ್ನೂ ಗಾಳಿಗೆ ತೂರಿ, ಮತದಾರರನ್ನು ಸೆಳೆಯಲು ಕಳ್ಳ ಮಾರ್ಗದಲ್ಲಿ ಹೆಚ್ಚಿನ ಹಣ ವ್ಯಯಿಸುತ್ತಾರೆ. ಹೀಗಾಗಿ ಚುನಾವಣಾ ಆಯೋಗ ಅಭ್ಯರ್ಥಿ ಖರ್ಚು...




