Drone Pilot Training: 15 ದಿನಗಳ ಕಾಲ ವಸತಿಸಹಿತ ತರಬೇತಿ – ಡ್ರೋನ್ ಪೈಲಟ್ ತರಬೇತಿಗಾಗಿ ಇಂದೇ ಅರ್ಜಿ ಸಲ್ಲಿಸಿ
Drone Pilot Training by Social Welfare Department: ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 15 ದಿನಗಳ ಕಾಲ ವಸತಿ ಸಹಿತ ತರಬೇತಿ ನೀಡಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂ ರ್ಣಗೊಳಿಸುವವರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಬೆಂಗಳೂರು: ಡ್ರೋನ್ ನಿರ್ವಹಣೆಯ ಮೂಲಕ ವೃತ್ತಿಜೀವನ ರೂಪಿಸಿಕೊಳ್ಳಲು ನೆರವಾಗಲು ಸಮಾಜ ಕಲ್ಯಾಣ ಇಲಾಖೆಯಿಂದ (Department of Social Welfare, Karnataka) ಪರಿಶಿಷ್ಟ ಜಾತಿಯ ಅಭ್ಯರ್ಥಿ ಗಳಿಗಾಗಿ ರೂಪಿಸಿರುವ ‘ಡ್ರೋನ್ ಪೈಲಟ್’ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಹಂತದಲ್ಲೇ 1,248 ಜನರು ಆಸಕ್ತಿ ತೋರಿ ಅರ್ಜಿ ಸಲ್ಲಿಸಿದ್ದಾರೆ. ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ, ಕೃಷಿ, ಗಣಿ, ಲಾಜಿಸ್ಟಿಕ್ಸ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಡ್ರೋನ್ ಗಳು ಬಳಕೆಯಾಗುತ್ತಿರುವುದರಿಂದ ಉದ್ಯೋಗವಕಾಶಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಡ್ರೋನ್ ನಿರ್ವಹಣೆಯ ತರಬೇತಿ (Drone Pilot Training) ನೀಡುವ ಯೋಜನೆಯನ್ನು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿತ್ತು. ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪುರುಷರು ಹಾಗೂ ಮಹಿಳೆಯರು ಸೇರಿ 5 ಸಾವಿರ ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.
ಡ್ರೋನ್ ಪೈಲಟ್ ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 15 ದಿನಗಳ ಕಾಲ ವಸತಿ ಸಹಿತ ತರಬೇತಿ ನೀಡಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂ ರ್ಣಗೊಳಿಸುವವರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ 18 ರಿಂದ 65 ವರ್ಷದೊಳಗಿನ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ petc. kar.nic.in ವೆಬ್‌ಸೈಟಿಗೆ ಭೇಟಿ ನೀಡಬಹುದು.
ಇನ್ನಷ್ಟು ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:15 pm, Fri, 2 August 24