15,000 ಪದವೀಧರ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ, ತೃತೀಯ ಲಿಂಗಿಗಳು ಆಯ್ಕೆ

15,000 ಪದವೀಧರ, ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಯಾಗಿದ್ದು, ಇದೇ ಮೊದಲ ಬಾರಿಗೆ ತೃತೀಯ ಲಿಂಗಿಗಳು ಆಯ್ಕೆಯಾಗಿದ್ದಾರೆ.

15,000 ಪದವೀಧರ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ, ತೃತೀಯ ಲಿಂಗಿಗಳು ಆಯ್ಕೆ
ಶಿಕ್ಷಣ ಸಚಿವ ಬಿಸಿ ನಾಗೇಶ್​​
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 18, 2022 | 7:30 PM

ಬೆಂಗಳೂರು:  ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿದೆ. 13,363 ಪರೀಕ್ಷಾರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದು, 10 ತೃತೀಯ ಲಿಂಗಿಗಳ ಪೈಕಿ, 3 ತೃತೀಯ ಲಿಂಗಿಗಳು ಆಯ್ಕೆಯಾಗಿರುವುದು ವಿಶೇಷ.

ಇನ್ನು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್,ಒಟ್ಟು 15000 ಪಧವೀದರ ಹುದ್ದೆಗಳ ಪೈಕಿ 13363 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 34 ಇಂಜಿನಿಯರಿಂಗ್ ಅಭ್ಯರ್ಥಿಗಳ ಪೈಕಿ 19 ಜನರು ಆಯ್ಕೆಯಾಗಿದ್ದು, ಯಾವುದೇ ರೀತಿಯ ಗೊಂದಲಗಳು ಇಲ್ಲದೆ ಇಲಾಖೆ ಪರೀಕ್ಷೆ ನಡೆಸಿದೆ ಎಂದು ಮಾಹಿತಿ ನೀಡಿದರು.

15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕಟ್ಟು ನಿಟ್ಟಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಿದ ದಿನದಿಂದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆವರೆಗಿನ ಪ್ರಕ್ರಿಯೆಯನ್ನು 9 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ ಎಂದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ ಎಂದು ನಾಗೇಶ್ ಹೇಳಿದರು.

https://schooleducation.kar.nic.in ವೆಬ್‌ಸೈಟ್​ಗೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು  ನೋಡಬಹುದು.

  • ಹೈ-ಕ ಭಾಗದಲ್ಲಿ 5000 ಹುದ್ದೆ ಮೀಸಲು ಪೈಕಿ 4187 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
  • ಇಂಗ್ಲಿಷ್ ಭಾಷೆಯಲ್ಲಿ 1807 ಹುದ್ದೆ ಪೈಕಿ 1768 ಅಭ್ಯರ್ಥಿಗಳು ಆಯ್ಕೆ.
  • ಗಣಿತ, ವಿಜ್ಞಾನ ಭಾಷೆಯಲ್ಲಿ 6500 ಪೈಕಿ 5450 ಅಭ್ಯರ್ಥಿಗಳು ಆಯ್ಕೆ.
  • ಸಮಾಜ ವಿಜ್ಞಾನ ಭಾಷೆಯಲ್ಲಿ 4693 ಪೈಕಿ 4521 ಅಭ್ಯರ್ಥಿಗಳು ಆಯ್ಕೆ.
  • ಜೀವವಿಜ್ಞಾನ ಭಾಷೆಯಲ್ಲಿ 2000 ಹುದ್ದೆ ಪೈಕಿ 1694 ಅಭ್ಯರ್ಥಿಗಳು ಆಯ್ಕೆ

Published On - 7:25 pm, Fri, 18 November 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್