AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teacher Recruitment 2025: 4500 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತ ಅಭ್ಯರ್ಥಿಗಳು ಆನ್ಲೈನ್​​ನಲ್ಲಿ ಅರ್ಜಿ ಸಲ್ಲಿಸಿ

ಅಸ್ಸಾಂನ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ (DEE) 4,500 ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಫೆಬ್ರವರಿ 15 ರಿಂದ ಮಾರ್ಚ್ 31 ರವರೆಗೆ ಅರ್ಜಿ ಸಲ್ಲಿಸಬಹುದು. TET/CTET ಪಾಸ್ ಆಗಿರುವ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Teacher Recruitment 2025: 4500 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತ ಅಭ್ಯರ್ಥಿಗಳು ಆನ್ಲೈನ್​​ನಲ್ಲಿ ಅರ್ಜಿ ಸಲ್ಲಿಸಿ
Teacher Jobs
ಅಕ್ಷತಾ ವರ್ಕಾಡಿ
|

Updated on: Feb 14, 2025 | 12:21 PM

Share

ಶಿಕ್ಷಕರ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಶುಭ ಸುದ್ದಿ. 4500 ಸರ್ಕಾರಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಸ್ಸಾಂನ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ (DEE) 4,500 ಕಿರಿಯ ಪ್ರಾಥಮಿಕ (LP) ಮತ್ತು ಹಿರಿಯ ಪ್ರಾಥಮಿಕ (UP) ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 15 ರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್ dee.assam.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಹುದ್ದೆಗಳ ಪೈಕಿ, 2900 ಹುದ್ದೆಗಳು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳಿಗೆ ಮತ್ತು 1,600 ಹುದ್ದೆಗಳು ಹಿರಿಯ ಪ್ರಾಥಮಿಕ (ಯುಪಿ) ಶಾಲೆಗಳಲ್ಲಿ ಸಹಾಯಕ ಶಿಕ್ಷಕರು, ವಿಜ್ಞಾನ ಶಿಕ್ಷಕರು ಮತ್ತು ಹಿಂದಿ ಶಿಕ್ಷಕರ ಹುದ್ದೆಗಳಿಗೆ ಸೇರಿವೆ. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಯಾವ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆ ಏನು?

ಅರ್ಜಿದಾರರು TET CTET ಉತ್ತೀರ್ಣರಾಗಿರಬೇಕು. ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೊಮಾ ಕೂಡ ಇರಬೇಕು. ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 40 ವರ್ಷಗಳ ನಡುವೆ ಇರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: 10 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ; ಈ ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕೃತ ವೆಬ್‌ಸೈಟ್ dee.assam.gov.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ನೇಮಕಾತಿ ಟ್ಯಾಬ್‌ಗೆ ಹೋಗಿ.
  • ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಲ್ಲಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಈಗಲೇ ನೋಂದಾಯಿಸಿ ಮತ್ತು ಫಾರ್ಮ್ ಅನ್ನು ಭರ್ತಿ ಮಾಡಿ.
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಶುಲ್ಕವನ್ನು ಪಾವತಿಸಿ ಮತ್ತು ಸಲ್ಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ