
ಶಿಕ್ಷಕರ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಶುಭ ಸುದ್ದಿ. 4500 ಸರ್ಕಾರಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಸ್ಸಾಂನ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ (DEE) 4,500 ಕಿರಿಯ ಪ್ರಾಥಮಿಕ (LP) ಮತ್ತು ಹಿರಿಯ ಪ್ರಾಥಮಿಕ (UP) ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 15 ರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್ dee.assam.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಹುದ್ದೆಗಳ ಪೈಕಿ, 2900 ಹುದ್ದೆಗಳು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳಿಗೆ ಮತ್ತು 1,600 ಹುದ್ದೆಗಳು ಹಿರಿಯ ಪ್ರಾಥಮಿಕ (ಯುಪಿ) ಶಾಲೆಗಳಲ್ಲಿ ಸಹಾಯಕ ಶಿಕ್ಷಕರು, ವಿಜ್ಞಾನ ಶಿಕ್ಷಕರು ಮತ್ತು ಹಿಂದಿ ಶಿಕ್ಷಕರ ಹುದ್ದೆಗಳಿಗೆ ಸೇರಿವೆ. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಯಾವ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಅರ್ಜಿದಾರರು TET CTET ಉತ್ತೀರ್ಣರಾಗಿರಬೇಕು. ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೊಮಾ ಕೂಡ ಇರಬೇಕು. ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 40 ವರ್ಷಗಳ ನಡುವೆ ಇರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಇದನ್ನೂ ಓದಿ: 10 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ; ಈ ಕೂಡಲೇ ಅರ್ಜಿ ಸಲ್ಲಿಸಿ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ