AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಪಿಎಸ್​ಐ ಮರುಪರೀಕ್ಷೆ, ಕೇಂದ್ರಗಳ ಸುತ್ತ ನಿಷೇಧಾಜ್ಞೆ, ಬಿಗಿ ಪೊಲೀಸ್ ಬಂದೋಬಸ್ತ್​

ನಾಳೆ(ಜನವರಿ 23) ಬೆಂಗಳೂರಿನಲ್ಲಿ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್​ಐ ಮರುಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಾಗಾದ್ರೆ, ಸೆಕ್ಯೂರಿಟಿ ಹೇಗಿರಲಿದೆ? ಎನ್ನುವ ವಿವರ ಇಲ್ಲಿದೆ.

ನಾಳೆ ಪಿಎಸ್​ಐ ಮರುಪರೀಕ್ಷೆ, ಕೇಂದ್ರಗಳ ಸುತ್ತ ನಿಷೇಧಾಜ್ಞೆ, ಬಿಗಿ ಪೊಲೀಸ್ ಬಂದೋಬಸ್ತ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 22, 2024 | 9:32 PM

Share

ಬೆಂಗಳೂರು, (ಜನವರಿ 22): 545 ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ (ಪಿಎಸ್​ಐ) ನೇಮಕಾತಿ ಮರು ಪರೀಕ್ಷೆಯು ನಾಳೆ ಅಂದರೆ ಜನವರಿ 23ರಂದು ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ನಾಳೆ (ಮಂಗಳವಾರ) ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡಲು ಆದೇಶದಲ್ಲಿ ಸೂಚಿಸಿದ್ದಾರೆ. ಈ ಹಿಂದೆ ನಡೆದ ಘಟನೆಗಳು ಮರುಕಳಿಸಬಾರದೆಂದು ಈ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಸೂಚಿಸಿರುವಂತೆ ಅಭ್ಯರ್ಥಿಗಳು ವಸ್ತ್ರಸಂಹಿತೆಯನ್ನು ಪಾಲಿಸಬೇಕೆಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್​ ರಮ್ಯಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ವಿವರ

54 ಸಾವಿರ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಣಿ ಮಾಡಿಕೊಂಡಿದ್ದು, ಪರೀಕ್ಷೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮತ್ತು ಮಧ್ಯಾಹ್ನ 1ರಿಂದ 2.30ರ ವರೆಗೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ನಾಲ್ವರು ಸಶಸ್ತ್ರ ಪೇದೆ ಮತ್ತು ಇಬ್ಬರು ಮಹಿಳಾ ಪೇದೆ ಸೇರಿದಂತೆ ಒಟ್ಟು 6 ಮಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಪೊಲೀಸರು ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಸ್ಪದವಾಗಿ ಓಡಾಡುವವರ, ಗಾಳಿ ಸುದ್ದಿ ಹಬ್ಬಿಸುವ ಕಿಡಿಗೇಡಿಗಳು ಮತ್ತು ಜೆರಾಕ್ಸ್ ಅಂಗಡಿಗಳ ಮೇಲೆ ಹದ್ದಿನ ಕಣ್ಣಿಡಲಿದ್ದಾರೆ. 200 ಮೀಟರ್ ಸುತ್ತ ನಿಷೇಧಾಜ್ಞೆ ಘೋಷಿಸಿದ್ದು, ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನು ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುತ್ತದೆ.

ಇನ್ನು ಅಭ್ಯರ್ಥಿಗಳು ಕೆಇಎ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೆಕು. ಎಲೆಕ್ಟ್ರಾನಿಕ್ ಸಾಧನ, ಮೊಬೈಲ್ ಸೇರಿದಂತೆ ಕೆಲ ವಸ್ತುಗಳನ್ನು ನಿಷೇಧಿಸಲಾಗಿದೆ.

ಮಾರ್ಗಸೂಚಿ ಹೀಗಿದೆ

  • ಶರ್ಟ್ ಅಥವಾ ಪ್ಯಾಂಟ್ ಗಳಿಗೆ ಜಿಪ್ ಪ್ಯಾಕೆಟ್ ಗಳು, ದೊಡ್ಡ ದೊಡ್ಡ ಗುಂಡಿಗಳು, ಎಕ್ಸ್ಟ್ರಾ ಡಿಸೈನ್ ಇರಬಾರದು.
  •  ಪರೀಕ್ಷಾ ಹಾಲ್ ಗೆ ಶೂ ಹಾಕಿಕೊಂಡು ಹೋಗುವುದು ನಿಷೇಧಿಸಲಾಗಿದ್ದು, ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ ನೀಡಲಾಗಿದೆ.
  • ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸಲು ನಿಷೇಧಿಸಲಾಗಿದೆ.
  • ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರ ಹಾಲ್ ಗೆ ಪ್ರವೇಶವಿಲ್ಲ.
  • ಯಾವುದೇ ರೀತಿಯಾದ ಅಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಬದಲಿಗೆ ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ.
  • ಎಲ್ಲಾ ಅಭ್ಯರ್ಥಿಗಳಿಗೆ ಹ್ಯಾಟ್ ಧರಿಸದಂತೆ ಸೂಚನೆ.
  • ಎಲ್ಲರಿಗೂ ಮಾಸ್ಕ್ ಧರಿಸದಂತೆ ಸೂಚನೆ.
  • ಪ್ರವೇಶ ಪತ್ರ ಕಡ್ಡಾಯವಾಗಿ ತರಬೇಕು.
  • ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯ.
  • ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್​ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ.

ಮಹಿಳಾ ಅಭ್ಯರ್ಥಿಗಳಿಗೆ ಸಹ ಪ್ರತ್ಯೇಕ ಮಾರ್ಗಸೂಚಿ

  • ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ.
  • ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ
  • ಮುಜುಗರವಾಗದಂತೆ ಅರ್ಧ ತೋಳಿನ‌ ಬಟ್ಟೆ ಬಳಸಬೇಕು
  • ಇನ್ನೊಬ್ಬರಿಗೆ ಮುಜುಗರವಾಗದಂತೆ ಟಾಪ್ ಗಳು ಬಳಸಲು ಸೂಚನೆ.
  • ಹೈ ಹೀಲ್ಸ್ ಚಪ್ಪಲಿ-ಶೂ ನಿಷೇಧ.
  • ಮಹಿಳಾ ಅಭ್ಯರ್ಥಿಗಳಿಗೂ ಕೂಡ ಯಾವುದೇ ರೀತಿಯ ಲೋಹ, ಚೈನ್ ಬಳಸದಂತೆ ಸೂಚನೆ.
  • ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ.

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ