ESIC Recruitment 2025: ESIC ನಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ, ಬಂಪರ್ ಹುದ್ದೆಗಳಿಗೆ ನೇಮಕಾತಿ ಆರಂಭ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ನೌಕರರ ರಾಜ್ಯ ವಿಮಾ ನಿಗಮ (ESIC) 558 ಸ್ಪೆಷಲಿಸ್ಟ್ ಗ್ರೇಡ್-II ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. MD, MS, MCH ಮತ್ತು MSC ನಂತಹ ಸ್ನಾತಕೋತ್ತರ ಪದವಿ ಮುಂತಾದ ಪದವೀಧರರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 26 (ಕೆಲವು ರಾಜ್ಯಗಳಿಗೆ ಮೇ 2) ಕೊನೆಯ ದಿನಾಂಕ. ಈ ನೇಮಕಾತಿಯ ಮೂಲಕ ಆಯ್ಕೆಯಾದ ಆಭ್ಯರ್ಥಿಗಳಿಗೆ 78,800 ರೂ.ಗಳ ವರೆಗೆ ಆರಂಭಿಕ ವೇತನ ಸೀಗಲಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.

ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ನೌಕರರ ರಾಜ್ಯ ವಿಮಾ ನಿಗಮ (ESIC) ದೇಶಾದ್ಯಂತ ವಿವಿಧ ಪ್ರದೇಶಗಳಲ್ಲಿ ಸ್ಪೆಷಲಿಸ್ಟ್ ಗ್ರೇಡ್ -2 ಹುದ್ದೆಗಳಿಗೆ ಬಂಪರ್ ನೇಮಕಾತಿಗಳನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 558 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಏಪ್ರಿಲ್ 26 ರವರೆಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕೆಲವು ವಿಶೇಷ ರಾಜ್ಯಗಳಿಗೆ ಅರ್ಜಿಗಳನ್ನು ಕಳುಹಿಸಲು ಕೊನೆಯ ದಿನಾಂಕವನ್ನು ಮೇ 2 ಎಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಈ ನೇಮಕಾತಿಗೆ ನೀಡಿರುವ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಖಾಲಿ ಹುದ್ದೆಗಳ ವಿವರ ಇಲ್ಲಿವೆ:
- ಸ್ಪೆಷಲಿಸ್ಟ್ ಗ್ರೇಡ್-II (ಸೀನಿಯರ್ ಸ್ಕೇಲ್) – 155 ಹುದ್ದೆಗಳು
- ಸ್ಪೆಷಲಿಸ್ಟ್ ಗ್ರೇಡ್-II (ಜೂನಿಯರ್ ಸ್ಕೇಲ್) – 403 ಹುದ್ದೆಗಳು
ESIC ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಬಹುದು?
ಈ ನೇಮಕಾತಿಗೆ ಸೇರಲು, ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ MD, MS, MCH, DM, DA, DPM ಅಥವಾ MSC ನಂತಹ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಅಲ್ಲದೆ, ಅರ್ಜಿದಾರರ ಗರಿಷ್ಠ ವಯಸ್ಸು 45 ವರ್ಷಗಳಿಗಿಂತ ಹೆಚ್ಚಿರಬಾರದು. ಆದಾಗ್ಯೂ, ಕಾಯ್ದಿರಿಸಿದ ವರ್ಗಗಳ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆಯ ಪ್ರಯೋಜನವನ್ನು ಪಡೆಯುತ್ತಾರೆ.
ಇದನ್ನೂ ಓದಿ: ವಿದೇಶದಲ್ಲಿ ಶಿಕ್ಷಕ ಹುದ್ದೆ ಪಡೆಯಲು ಇಲ್ಲಿದೆ ಸುವರ್ಣವಕಾಶ; ಸ್ನಾತಕೋತ್ತರ ಮತ್ತು ಬಿ.ಎಡ್ ಪದವಿಧರರು ಕೂಡಲೇ ಅರ್ಜಿ ಸಲ್ಲಿಸಿ
ಸಂಬಳ ಎಷ್ಟು ಸಿಗಲಿದೆ?
ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ವೇತನ ಮಟ್ಟ 12 (7ನೇ ವೇತನ ಆಯೋಗ) ಅಡಿಯಲ್ಲಿ ತಿಂಗಳಿಗೆ ಆರಂಭಿಕ ವೇತನ 78,800 ರೂ.ಗಳನ್ನು ಪಡೆಯುತ್ತಾರೆ. ಇದಲ್ಲದೆ, ಟಿಎ, ಡಿಎ, ಎನ್‌ಪಿಎ, ಎಚ್‌ಆರ್‌ಎ ಮುಂತಾದ ಎಲ್ಲಾ ಸೌಲಭ್ಯಗಳು ಸಹ ಕಾಲಕಾಲಕ್ಕೆ ಲಭ್ಯವಿರುತ್ತವೆ.
ESIC ನೇಮಕಾತಿ ಅರ್ಜಿ ಸಲ್ಲಿಸುವುದು ಹೇಗೆ?
ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ESIC ಯ ಅಧಿಕೃತ ವೆಬ್‌ಸೈಟ್ esic.gov.in ನ ನೇಮಕಾತಿ ವಿಭಾಗದಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಇದರ ನಂತರ, ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ನಿಗದಿತ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ