AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಚೆ ಇಲಾಖೆಯ ಡ್ರೈವರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 63 ಸಾವಿರ ರೂ.

post office recruitment 2022: ಪರೀಕ್ಷೆಯ ದಿನಾಂಕ ಮತ್ತು ಸ್ಥಳವನ್ನು ಅರ್ಹ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ತಿಳಿಸಲಾಗುವುದು. ಅರ್ಹರಲ್ಲದ ಇತರ ಅರ್ಜಿದಾರರಿಗೆ ಸಂಬಂಧಿಸಿದಂತೆ ಯಾವುದೇ ಸೂಚನೆಯನ್ನು ಕಳುಹಿಸಲಾಗುವುದಿಲ್ಲ.

ಅಂಚೆ ಇಲಾಖೆಯ ಡ್ರೈವರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 63 ಸಾವಿರ ರೂ.
post office recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 03, 2022 | 9:19 PM

ಅಂಚೆ ಇಲಾಖೆಯಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ಈ ಇಲಾಖೆಯಲ್ಲಿನ​ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಒಟ್ಟು 29 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅದರಂತೆ 15 ಸಾಮಾನ್ಯ ವರ್ಗದವರಿಗೆ, 8 ಒಬಿಸಿ, 3 ಎಸ್‌ಸಿ ಮತ್ತು 3 ಇಡಬ್ಲ್ಯೂಎಸ್‌ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು: ಒಟ್ಟು ಹುದ್ದೆಗಳು- 29 ಸಾಮಾನ್ಯ ವರ್ಗದವರಿಗೆ – 15 ಹುದ್ದೆಗಳು OBC – 8 ಹುದ್ದೆಗಳು SC – 3 ಹುದ್ದೆಗಳು EWS – 3 ಹುದ್ದೆಗಳು

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರಿಂದ ರೂ 63,200 ರವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಹತಾ ಮಾನದಂಡಗಳು: ಅಭ್ಯರ್ಥಿಯು ಲಘು ಮತ್ತು ಭಾರೀ ಮೋಟಾರು ವಾಹನಗಳಿಗೆ ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಮೋಟಾರ್ ಮೆಕ್ಯಾನಿಸಂನ ಜ್ಞಾನ (ಅಭ್ಯರ್ಥಿಯು ವಾಹನದಲ್ಲಿನ ಸಣ್ಣ ದೋಷಗಳನ್ನು ತೆಗೆದುಹಾಕಲು ಶಕ್ತರಾಗಿರಬೇಕು) ಹೊಂದಿರಬೇಕು. ಕನಿಷ್ಠ ಮೂರು ವರ್ಷಗಳ ಲಘು ಮತ್ತು ಭಾರೀ ವಾಹನ ಚಾಲನೆ ಅನುಭವ ಹೊಂದಿರಬೇಕು. ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅರ್ಜಿದಾರರ ವಯಸ್ಸು 18 ರಿಂದ 27 ವರ್ಷಗಳ ನಡುವೆ ಇರಬೇಕು. ಎಸ್‌ಸಿ ಮತ್ತು ಎಸ್‌ಟಿಗೆ 5 ಹಾಗೂ ಒಬಿಸಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಮೋಟಾರು ಯಂತ್ರಗಳ ಜ್ಞಾನ ಮತ್ತು ವಾಹನದಲ್ಲಿನ ಸಣ್ಣ ದೋಷಗಳನ್ನು ತೆಗೆದುಹಾಕುವ ಸಾಮರ್ಥ್ಯ ಸೇರಿದಂತೆ ಲಘು ಮತ್ತು ಭಾರೀ ಮೋಟಾರು ವಾಹನಗಳನ್ನು ಓಡಿಸಲು ಅವರ ಸಾಮರ್ಥ್ಯವನ್ನು ನಿರ್ಣಯಿಸಲು ಇಲಾಖೆಯು ಸೂಚಿಸಿದಂತೆ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆಯ ದಿನಾಂಕ ಮತ್ತು ಸ್ಥಳವನ್ನು ಅರ್ಹ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ತಿಳಿಸಲಾಗುವುದು. ಅರ್ಹರಲ್ಲದ ಇತರ ಅರ್ಜಿದಾರರಿಗೆ ಸಂಬಂಧಿಸಿದಂತೆ ಯಾವುದೇ ಸೂಚನೆಯನ್ನು ಕಳುಹಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ? ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 15, 2022 ರೊಳಗೆ ಅರ್ಜಿ ಸಲ್ಲಿಸಬೇಕು. ಅಪ್ಲಿಕೇಶನ್‌ಗಳ ಮಾಹಿತಿಯನ್ನು ಸೂಕ್ತವಾದ ದಪ್ಪ ಕಾಗದದ ಲಕೋಟೆಯ ಮೇಲೆ “ಸಿಬ್ಬಂದಿ ಹುದ್ದೆಗೆ ಅರ್ಜಿ” ಎಂದು ಸ್ಪಷ್ಟವಾಗಿ ಬರೆಯಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: “The Senior Manager , Mail Motor Service, C-121, Naraina Industrial Area phase-I, Naraina, New Delhi -110028.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(7th pay commission scale jobs for india post office recruitment 2022)

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ