AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF Recruitment 2022: KMF​ನಲ್ಲಿ ಕೆಲಸ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ, 487 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹಾಲು ಒಕ್ಕೂಟ ನಿಯಮಿತ ಒಟ್ಟು 487 ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 19.11.2022 ಒಳಗಾಗಿ ಅರ್ಜಿ ಸಲ್ಲಿಸಬೇಕು.

KMF Recruitment 2022:  KMF​ನಲ್ಲಿ ಕೆಲಸ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ, 487 ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 25, 2022 | 1:15 PM

Share

ಕರ್ನಾಟಕ ಹಾಲು ಒಕ್ಕೂಟ ನಿಯಮಿತ ಒಟ್ಟು 487 ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 19.11.2022 ಒಳಗಾಗಿ ಅರ್ಜಿ ಸಲ್ಲಿಸಬೇಕು. ಕೆಎಂಎಫ್ 487 ಖಾಲಿರುವ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗಾಗಿ https://www.kmfnandini.coop/kn ಈ ಲಿಂಕ್​ಗೆ ಭೇಟಿ ನೀಡಿ

ಹುದ್ದೆಗಳ ವಿವರ 

  1. ಕಿರಿಯ ತಾಂತ್ರಿಕ
  2.  ಉಪ ನಿರ್ದೇಶಕರು
  3.  ಜೂನಿಯರ್ ತಾಂತ್ರಿಕ ಸಹಾಯಕರು

ಒಟ್ಟು 487 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಕ್ಷಣವೇ ಅರ್ಜಿ ಸಲ್ಲಿಸಿ, ಹೆಚ್ಚಿನ ವಿವರಗಳಿಗಾಗಿ ಕೆಎಂಎಫ್​ನ ಅಧಿಕೃತ ವೆಬ್ ಸೈಟ್​ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು 20.10.2022 ಆರಂಭವಾಗಿದೆ. 19.11.2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಹುದ್ದೆಯ ವಯೋಮಿತಿ

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷಗಳಾಗಿರಬೇಕು. ಪ್ರವರ್ಗ 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 38 ವರ್ಷವಾಗಿರಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷಗಳ ವಯೋಮಿತಿ ಮೀರಿರಬಾರದು ಎಂದು ಹೇಳಿದೆ.

ಅರ್ಜಿ ಶುಲ್ಕ :

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 500 ರೂ. ಇತರೆ ವರ್ಗದ ಅಭ್ಯರ್ಥಿಗಳು 1000 ರೂ. ಶುಲ್ಕವನ್ನು ಪಾವತಿಸಬೇಕು.

ಶೈಕ್ಷಣಿಕ ಆರ್ಹತೆ 

ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳು ಬಿಎಸ್ಸಿ, ಎಂವಿಎಸ್ಸಿ, ಎಂಟೆಕ್,ಎಂಬಿಎ, ಎಂಬಿಬಿಎಸ್, ಐಸಿಡಬ್ಯೂಎ ಮಾನ್ಯತೆ ಪಡೆದ ವಿಶ್ವವಿದ್ಯಾಯಲಗಳಿಂದ ಮಾನ್ಯತೆ ಪಡೆದಿರಬೇಕು.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ಮಾಡಲಾಗುವುದು.

ವೇತನ:

ಕರ್ನಾಟಕ ಹಾಲು ಒಕ್ಕೂಟ ನಿಯಮಿತ ಆಯ್ಕೆಯಾದ ಅಭ್ಯರ್ಥಿಗೆ 17000 ರಿಂದ 99600 ರೂ. ವೇತನ ನೀಡಲಾಗುವುದು

Published On - 1:14 pm, Tue, 25 October 22

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!