AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhar Supervisor Vacancy 2026: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ಡಿಜಿಟಲ್ ಇಂಡಿಯಾ ಅಭಿಯಾನದಡಿ, CSC ಇ-ಗವರ್ನೆನ್ಸ್ ಸಂಸ್ಥೆಯು ಆಧಾರ್ ಸೂಪರ್‌ವೈಸರ್ ಮತ್ತು ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಒಟ್ಟು 252 ಹುದ್ದೆಗಳಿದ್ದು, ನಿಮ್ಮ ಸ್ವಂತ ಜಿಲ್ಲೆಯ ಆಧಾರ್ ಸೇವಾ ಕೇಂದ್ರಗಳಲ್ಲಿ ಕೆಲಸ ಮಾಡುವ ಅವಕಾಶವಿದೆ. 12ನೇ ತರಗತಿ ಅರ್ಹತೆ ಹೊಂದಿರುವವರು ಮಾರ್ಚ್ 10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ.

Aadhar Supervisor Vacancy 2026: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ
ಆಧಾರ್ ಕೇಂದ್ರಗಳಲ್ಲಿ ಉದ್ಯೋಗ
ಅಕ್ಷತಾ ವರ್ಕಾಡಿ
|

Updated on:Feb 20, 2026 | 4:21 PM

Share

ಸ್ವಂತ ಊರಿನಲ್ಲಿಯೇ ಕೆಲಸ ಮಾಡಬೇಕೆಂಬ ಹಂಬಲವಿರುವವರಿಗೆ ಇಲ್ಲಿದೆ ಗುಡ್​ ನ್ಯೂಸ್​. ಡಿಜಿಟಲ್ ಇಂಡಿಯಾ ಅಭಿಯಾನದಡಿ ಆಧಾರ್ ಸೇವೆಗಳನ್ನು ಜನಸಾಮಾನ್ಯರಿಗೆ ಹತ್ತಿರವಾಗಿಸಲು, ಸಿಎಸ್‌ಸಿ (CSC) ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್ ವತಿಯಿಂದ ಆಧಾರ್ ಮೇಲ್ವಿಚಾರಕ ಮತ್ತು ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯು ಅಭ್ಯರ್ಥಿಗಳಿಗೆ ತಮ್ಮದೇ ಜಿಲ್ಲೆಯ ಆಧಾರ್ ಸೇವಾ ಕೇಂದ್ರಗಳಲ್ಲಿ (ASKs) ಕೆಲಸ ಮಾಡುವ ಅಪೂರ್ವ ಅವಕಾಶವನ್ನು ನೀಡುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ 10ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಹುದ್ದೆಗಳ ವಿವರ ಮತ್ತು ಜವಾಬ್ದಾರಿಗಳು:

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 252 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳನ್ನು ಜಿಲ್ಲಾವಾರು ವಿಂಗಡಿಸಲಾಗಿದ್ದು, ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು.

  • ಆಧಾರ್ ಮೇಲ್ವಿಚಾರಕರು (Supervisor): ಕೇಂದ್ರದ ಸಂಪೂರ್ಣ ಕಾರ್ಯಾಚರಣೆಯ ಉಸ್ತುವಾರಿ ಮತ್ತು ನಿರ್ವಹಣೆ.
  • ಆಧಾರ್ ಆಪರೇಟರ್ (Operator): ಹೊಸ ಆಧಾರ್ ದಾಖಲಾತಿ, ಮಾಹಿತಿ ತಿದ್ದುಪಡಿ ಮತ್ತು ನವೀಕರಣದಂತಹ ತಾಂತ್ರಿಕ ಕಾರ್ಯಗಳು.

ಅರ್ಹತೆಗಳು ಮತ್ತು ಮಾನದಂಡಗಳು:

  • ಶೈಕ್ಷಣಿಕ ಅರ್ಹತೆ: ಕನಿಷ್ಠ 12ನೇ ತರಗತಿ (ಪಿಯುಸಿ) ಉತ್ತೀರ್ಣ ಅಥವಾ 10ನೇ ತರಗತಿ ಜೊತೆಗೆ 2 ವರ್ಷಗಳ ಐಟಿಐ ಅಥವಾ 10ನೇ ತರಗತಿ ಜೊತೆಗೆ 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೊಮಾ. ಕಂಪ್ಯೂಟರ್ ಬಳಕೆಯ ಮೂಲಭೂತ ಜ್ಞಾನ ಅತ್ಯಗತ್ಯ.
  • ವಯೋಮಿತಿ: ಕನಿಷ್ಠ 18 ವರ್ಷ ತುಂಬಿರಬೇಕು.
  • ಭಾಷಾ ಜ್ಞಾನ: ಅರ್ಜಿ ಸಲ್ಲಿಸುವ ಜಿಲ್ಲೆಯ ಸ್ಥಳೀಯ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡಲು ಮತ್ತು ಬರೆಯಲು ಬರಬೇಕು.

ಇದನ್ನೂ ಓದಿ: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಸಂಬಳ ಮತ್ತು ನೇಮಕಾತಿ ಅವಧಿ:

  • ಸಂಬಳ: ಆಯಾ ರಾಜ್ಯಗಳ ಕಾರ್ಮಿಕ ಕಾನೂನು ಹಾಗೂ ಮಾನದಂಡಗಳಿಗೆ ಅನುಗುಣವಾಗಿ ವೇತನ ಇರಲಿದೆ.
  • ನೇಮಕಾತಿ ವಿಧಾನ: ಇದು ಸಂಪೂರ್ಣವಾಗಿ ಒಪ್ಪಂದದ ಆಧಾರಿತ (Contractual) ನೇಮಕಾತಿಯಾಗಿದೆ.
  • ಅವಧಿ: ಆರಂಭದಲ್ಲಿ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು. ನಿಮ್ಮ ಉತ್ತಮ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಅವಧಿಯನ್ನು ವಿಸ್ತರಿಸುವ ಸಾಧ್ಯತೆಯೂ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಮೊದಲು ಅಧಿಕೃತ ವೆಬ್‌ಸೈಟ್ csc.gov.in/ask ಗೆ ಲಾಗಿನ್ ಆಗಿ.
  • ನಿಮ್ಮ ರಾಜ್ಯ ಮತ್ತು ಜಿಲ್ಲಾವಾರು ಲಭ್ಯವಿರುವ ಹುದ್ದೆಗಳನ್ನು ನೋಡಿ.
  • “Apply Now” ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರು, ಮೊಬೈಲ್ ಸಂಖ್ಯೆ, ಇಮೇಲ್ ಮತ್ತು ಪ್ಯಾನ್ (PAN) ವಿವರಗಳನ್ನು ಭರ್ತಿ ಮಾಡಿ.
  • ನಿಮ್ಮ ಅಪ್‌ಡೇಟೆಡ್ ರೆಸ್ಯೂಮ್ (Resume) ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
  • ಕ್ಯಾಪ್ಚಾ ನಮೂದಿಸಿ ಅರ್ಜಿಯನ್ನು ಸಬ್‌ಮಿಟ್ ಮಾಡಿ. ಮುಂದಿನ ರೆಫರೆನ್ಸ್‌ಗಾಗಿ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Fri, 20 February 26

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?