AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AAI Recruitment 2025: AAIನಲ್ಲಿ 89 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಪಾಸಾಗಿದ್ರೆ ಸಾಕು!

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)ವು 89 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ತಿಂಗಳಿಗೆ 31,000 ರಿಂದ 92,000 ರೂ. ವೇತನ ನಿಗದಿಯಾಗಿದೆ. 10ನೇ, 12ನೇ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ 18-30 ವರ್ಷಗಳು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿರುತ್ತದೆ.

AAI Recruitment 2025: AAIನಲ್ಲಿ 89 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಪಾಸಾಗಿದ್ರೆ ಸಾಕು!
Aai Recruitment 2025
ಅಕ್ಷತಾ ವರ್ಕಾಡಿ
|

Updated on: Mar 13, 2025 | 11:50 AM

Share

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ( AAI ) ಅಧಿಕೃತ ಅಧಿಸೂಚನೆ ಮೂಲಕ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

AAI ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ( AAI )
  • ಹುದ್ದೆಗಳ ಸಂಖ್ಯೆ: 89
  • ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್
  • ಸಂಬಳ: ತಿಂಗಳಿಗೆ ರೂ. 31,000 – 92,000/-

ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: AAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ , 12 ನೇ ತರಗತಿ, ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
  • ವಯಸ್ಸಿನ ಮಿತಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-11-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.( ವಿವಿಧ ವರ್ಗಗಳ ಅನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.)
  • ಅರ್ಜಿ ಶುಲ್ಕ: ಯುಆರ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 1000/- (ಮಹಿಳೆಯರು/ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ)
  • ಪಾವತಿ ವಿಧಾನ: ಆನ್‌ಲೈನ್
  • ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಸುವರ್ಣವಕಾಶ; ತಿಂಗಳಿಗೆ 60 ಸಾವಿರ ರೂ. ಸಂಬಳ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ AAI ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ .
  • ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ: AAI-Reopen-Notice
  • ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • AAI ಜೂನಿಯರ್ ಅಸಿಸ್ಟೆಂಟ್ ಆನ್‌ಲೈನ್​​ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್​ ಮಾಡಿ.
  • AAI ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • AAI ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಗೆ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ಪ್ರಿಂಟ್​ ಕಾಪಿ ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !