AAI Recruitment 2022: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ (AAI) ಕೆಲಸ ಮಾಡಲು ಯೋಜಿಸುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ AAI ನಲ್ಲಿನ ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಖಾಲಿ ಇರುವ ಹುದ್ದೆಗಳ ಸಂಖ್ಯೆ:
ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)- 400 ಹುದ್ದೆಗಳು
ಅರ್ಹತಾ ಮಾನದಂಡಗಳು:
ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಭೌತಶಾಸ್ತ್ರ ಮತ್ತು ಗಣಿತದೊಂದಿಗೆ B.Sc ಅಥವಾ ಯಾವುದೇ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ಮಾಡಿರಬೇಕು. ಅಲ್ಲದೆ, ಅಭ್ಯರ್ಥಿಯು 10+2 ಮಾನದಂಡದ ಅರ್ಹತೆಯಲ್ಲಿ ಇಂಗ್ಲಿಷ್ ಬರವಣಿಗೆ ಮತ್ತು ಮಾತನಾಡುವ ಉತ್ತಮ ಪ್ರಾವೀಣ್ಯತೆಯನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ 27 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ:
ಈ ಹುದ್ದೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 40000 – 140000 ವೇತನವನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14ನೇ ಜುಲೈ 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.