AAI Recruitment 2022: ಈ ಅರ್ಹತೆ ಇದ್ದರೆ ನಿಮಗೆ ಏರ್​ಪೋರ್ಟ್​ನಲ್ಲಿ ಸಿಗಲಿದೆ ಉದ್ಯೋಗ

| Updated By: ಝಾಹಿರ್ ಯೂಸುಫ್

Updated on: Dec 11, 2022 | 6:11 AM

AAI Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ಯ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

AAI Recruitment 2022: ಈ ಅರ್ಹತೆ ಇದ್ದರೆ ನಿಮಗೆ ಏರ್​ಪೋರ್ಟ್​ನಲ್ಲಿ ಸಿಗಲಿದೆ ಉದ್ಯೋಗ
AAI Recruitment 2022
Follow us on

AAI Recruitment 2022: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಸಂಸ್ಥೆಯು ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಸಿವಿಲ್, ಇಂಜಿನಿಯರಿಂಗ್-ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆರ್ಕಿಟೆಕ್ಚರ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ಯ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 596
  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್- ಸಿವಿಲ್)-62 ಹುದ್ದೆಗಳು
  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಎಲೆಕ್ಟ್ರಿಕಲ್)-84 ಹುದ್ದೆಗಳು
  • ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್)-440 ಹುದ್ದೆಗಳು
  • ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್)-10 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.
  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್ – ಸಿವಿಲ್) – ಸಿವಿಲ್‌ನಲ್ಲಿ ಎಂಜಿನಿಯರಿಂಗ್ / ಟೆಕ್ನಾಲಜಿ ಪದವಿ ಹೊಂದಿರಬೇಕು.
  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್ – ಎಲೆಕ್ಟ್ರಿಕಲ್) – ಎಲೆಕ್ಟ್ರಿಕಲ್‌ನಲ್ಲಿ ಎಂಜಿನಿಯರಿಂಗ್ / ಟೆಕ್ನಾಲಜಿ ಪದವಿ ಹೊಂದಿರಬೇಕು.
  • ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) – ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯುನಿಕೇಶನ್ / ಎಲೆಕ್ಟ್ರಿಕಲ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.
  • ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) – ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಆರ್ಕಿಟೆಕ್ಚರ್‌ನಲ್ಲಿ ಪದವಿಯನ್ನು ಹೊಂದಿರಬೇಕು ಮತ್ತು ಕೌನ್ಸಿಲ್ ಆಫ್ ಆರ್ಕಿಟೆಕ್ಟ್ಸ್‌ನಲ್ಲಿ ನೋಂದಾಯಿಸಿರಬೇಕು.

ವಯೋಮಿತಿ:
27 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 40 ಸಾವಿರದಿಂದ 1 ಲಕ್ಷದ 40 ಸಾವಿರದವರೆಗೆ ವೇತನ ನಿಗದಿಪಡಿಸಲಾಗುತ್ತದೆ.

ಇದನ್ನೂ ಓದಿ: Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 21, 2023

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.