AAI Recruitment 2023: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ 272 ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: Digi Tech Desk

Updated on: Jan 02, 2023 | 2:35 PM

AAI Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

AAI Recruitment 2023: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ 272 ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
Follow us on

AAI Recruitment 2023: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ (AAI) ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇದಕ್ಕಾಗಿ, ಎಎಐ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ aai.aero ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 272
  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್- ಸಿವಿಲ್): 32 ಹುದ್ದೆಗಳು
  • ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಎಲೆಕ್ಟ್ರಿಕಲ್): 47 ಹುದ್ದೆಗಳು
  • ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್): 186 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಈ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆನ್ನು ಸೂಚಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾದ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 300/- ಅನ್ನು ಆನ್‌ಲೈನ್ ಮೋಡ್ ಮೂಲಕ ಪಾವತಿಸಬೇಕಾಗುತ್ತದೆ. ಆದಾಗ್ಯೂ, SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು GATE 2020 ಅಥವಾ GATE 2021 ಅಥವಾ GATE 2022 ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ​- ಜನವರಿ 21, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

Published On - 6:52 pm, Sun, 1 January 23