AAI Recruitment: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಜೂನಿಯರ್ ಎಕ್ಸಿಕ್ಯೂಟಿವ್ ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದ 400 ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 14 ಆಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ (AAI) ಅಧಿಕೃತ ವೆಬ್ಸೈಟ್ www.aai.aero ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 400
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಭೌತಶಾಸ್ತ್ರ ಮತ್ತು ಗಣಿತದೊಂದಿಗೆ ಪೂರ್ಣ ಸಮಯದ ಬಿ.ಎಸ್ಸಿ ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತವನ್ನು ವಿಷಯಗಳಾಗಿ ಯಾವುದೇ ಇಂಜಿನಿಯರ್ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಹ ಸಲ್ಲಿಸಬಹುದಾಗಿದೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ, ಅರ್ಜಿದಾರನು 10ನೇ ಅಥವಾ 12 ನೇ ತರಗತಿಯಲ್ಲಿ ಒಂದು ವಿಷಯವಾಗಿ ಇಂಗ್ಲಿಷ್ ಅನ್ನು ಆಯ್ಕೆ ಮಾಡಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ 27 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವಿಭಾಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 40 ಸಾವಿರದಿಂದ 1,40000 ರೂ.ವರೆಗೆ ವೇತನ ಸಿಗಲಿದೆ. ಇದರ ಜೊತೆ ಭತ್ಯೆಗಳು ಹಾಗೂ ವೈದ್ಯಕೀಯ ಪ್ರಯೋಜನಗಳೂ ಕೂಡ ಲಭಿಸಲಿದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 14, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.