AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷಗಳ ಬಳಿಕ ಕರ್ನಾಟಕ ಸಾರಿಗೆ ನಿಗಮಗಳಲ್ಲಿ ನೇಮಕಾತಿ ಆರಂಭ

ರಾಜ್ಯಾದ್ಯಂತ ಶಕ್ತಿ ಯೋಜನೆಗೆ (ಮಹಿಳೆಯರಿಗೆ ಉಚಿತ ಬಸ್ ಸೇವೆ) ಭಾರೀ ಪ್ರತಿಕ್ರಿಯೆ ಮತ್ತು ಸಾರ್ವಜನಿಕ ಮೆಚ್ಚುಗೆಯನ್ನು ಗಮನದಲ್ಲಿಟ್ಟುಕೊಂಡು 5,675 ಹೊಸ ಬಸ್‌ಗಳನ್ನು ಖರೀದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೀನ್​ ಸಿಗ್ನಲ್​ ನೀಡಿದ್ದಾರೆ.

8 ವರ್ಷಗಳ ಬಳಿಕ ಕರ್ನಾಟಕ ಸಾರಿಗೆ ನಿಗಮಗಳಲ್ಲಿ ನೇಮಕಾತಿ ಆರಂಭ
ಕೆಕೆಆರ್​ಟಿಸಿ
ವಿವೇಕ ಬಿರಾದಾರ
|

Updated on: Oct 23, 2023 | 9:16 AM

Share

ಬೆಂಗಳೂರು ಅ.23: ಕರ್ನಾಟಕ ಸರ್ಕಾರವು ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ (RTC) 13,000 ಚಾಲಕ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಅನುಮೋದನೆ ನೀಡಿದೆ. ಕೊನೆಯದಾಗಿ ಎಂಟು ವರ್ಷಗಳ ಹಿಂದೆ 2016 ರಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ಬಳಿಕ ಇಲ್ಲಿಯವರೆಗೆ 13,669 ಉದ್ಯೋಗಿಗಳ ನಿವೃತ್ತಿ ಹೊಂದಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಮೊದಲ ಹಂತದಲ್ಲಿ 6,500 ಚಾಲನಾ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಇವುಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 2,000 ಚಾಲಕ-ಕಮ್-ಕಂಡಕ್ಟರ್‌ಗಳು ಮತ್ತು 300 ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುತ್ತದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) 2,000 ಚಾಲಕ-ಕಮ್-ಕಂಡಕ್ಟರ್‌ಗಳನ್ನು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2,500 ಕಂಡಕ್ಟರ್‌ಗಳನ್ನು ನೇಮಿಸಿಕೊಳ್ಳಲಿದೆ.

ಏತನ್ಮಧ್ಯೆ, ಕಲ್ಯಾಣ್ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಈಗಾಗಲೇ 1,619 ಡ್ರೈವಿಂಗ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅದರ ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಜನವರಿ 2024 ರ ಕೊನೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಕೆಕೆಆರ್‌ಟಿಸಿ 300 ಕಂಡಕ್ಟರ್‌ಗಳನ್ನು ನೇಮಿಸಿಕೊಳ್ಳಲು ಅನುಮತಿಯನ್ನು ಪಡೆದುಕೊಂಡಿದೆ ಮತ್ತು ಅಧಿಸೂಚನೆಯನ್ನು ನೀಡುವ ಪ್ರಕ್ರಿಯೆಯಲ್ಲಿದೆ. ನಾಲ್ಕು ನಿಗಮಗಳಲ್ಲಿ 8,719 ಡ್ರೈವಿಂಗ್ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡುವ ಪ್ರಕ್ರಿಯೆಯು ಪ್ರಾರಂಭವಾಗಿದೆ.

ಇದನ್ನೂ ಓದಿ: Shakti scheme: ಶಕ್ತಿ ಯೋಜನೆಗೆ ಒಂದು ತಿಂಗಳು; ಅತಿಹೆಚ್ಚು ಮಹಿಳೆಯರನ್ನು ಕರೆದೊಯ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ರಾಜ್ಯಾದ್ಯಂತ ಶಕ್ತಿ ಯೋಜನೆಗೆ (ಮಹಿಳೆಯರಿಗೆ ಉಚಿತ ಬಸ್ ಸೇವೆ) ಭಾರೀ ಪ್ರತಿಕ್ರಿಯೆ ಮತ್ತು ಸಾರ್ವಜನಿಕ ಮೆಚ್ಚುಗೆಯನ್ನು ಗಮನದಲ್ಲಿಟ್ಟುಕೊಂಡು 5,675 ಹೊಸ ಬಸ್‌ಗಳನ್ನು ಖರೀದಿಸುವ ಗುರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ.

ಬಜೆಟ್​​ನಲ್ಲಿ ಹೊಸ ಬಸ್ ಗಳ ಖರೀದಿಗೆ ಸರ್ಕಾರ ಈಗಾಗಲೇ 500 ಕೋಟಿ ರೂ.ಗಳನ್ನು ನೀಡಿದ್ದು, ಶೀಘ್ರ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಿದ್ದರಾಮಯ್ಯ ಸೂಚಿಸಿದರು. ಶಕ್ತಿ ಯೋಜನೆಯನ್ನು ಪ್ರಾರಂಭಿಸಿದ ನಂತರ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 15 ರಷ್ಟು ಹೆಚ್ಚಳವಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಹೆಚ್ಚುವರಿ ವೇಳಾಪಟ್ಟಿ ಮತ್ತು ಬಸ್‌ಗಳನ್ನು ಸೇರಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಸಾರಿಗೆ ಇಲಾಖೆಯ ಆದಾಯ ಗುರಿ ಸಂಗ್ರಹ ಹಾಗೂ ಆರ್‌ಟಿಸಿಗಳ ಹಣಕಾಸು ನಿರ್ವಹಣೆ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚೆ ನಡೆಸಲಾಯಿತು. ವಾಹನ ತಪಾಸಣೆಯಿಂದ 83 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ