AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಾನ್ಸ್‌ಟೇಬಲ್‌ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ವಯೋಮಿತಿ ಹೆಚ್ಚಿಸಿ ಸರ್ಕಾರ ಆದೇಶ

ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಕಾನ್ಸ್‌ಟೇಬಲ್‌ ನೇಮಕಾತಿಗೆ ಮಾತ್ರ ಇದು ಅನ್ವಯ.

ಪೊಲೀಸ್ ಕಾನ್ಸ್‌ಟೇಬಲ್‌ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ವಯೋಮಿತಿ ಹೆಚ್ಚಿಸಿ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 03, 2022 | 8:55 PM

Share

ಬೆಂಗಳೂರು: ಸಿವಿಲ್‌, CAR, DAR, ಪೊಲೀಸ್ ಕಾನ್ಸ್‌ಟೇಬಲ್‌ (police constable) ನೇಮಕಾತಿ ವಯೋಮಿತಿ (Age limit)  2 ವರ್ಷ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಕಾನ್ಸ್‌ಟೇಬಲ್‌ ನೇಮಕಾತಿಗೆ ಮಾತ್ರ ಇದು ಅನ್ವಯವಾಗಲಿದೆ. ರಾಜ್ಯ ಪೊಲೀಸ್ ಕಾನ್ಸ್ ಸ್ಟೇಬಲ್ ಗರಿಷ್ಟ ನೇಮಕ ವಯೋಮಿತಿ ಈ ಹಿಂದೆ ಒಂದು ಬಾರಿ ಹೆಚ್ಚಳ ಮಾಡಿದ್ದು, ಈಗ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಜಿಲ್ಲಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಕರೆಯಲಾಗಿದೆ. (ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3484 ಹುದ್ದೆಗಳಿವೆ. ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ.

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ವಯಸ್ಸಿಗೆ 35 ಹಾಗೂ ಇತರೆ ಅಭ್ಯರ್ಥಿಗಳಿಗೆ 33 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸಶಸ್ತ್ರ ಪಡೆಯ ಪೊಲೀಶ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷಗಳನ್ನು ನಿಗದಿ ಪಡಿಸಲಾಗಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:47 pm, Thu, 3 November 22

Follow Us
TV9 Web
TV9 Web

TV9 Kannada

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ