ಬೆಂಗಳೂರು: ಸಿವಿಲ್, CAR, DAR, ಪೊಲೀಸ್ ಕಾನ್ಸ್‌ಟೇಬಲ್ (police constable) ನೇಮಕಾತಿ ವಯೋಮಿತಿ (Age limit) 2 ವರ್ಷ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಕಾನ್ಸ್‌ಟೇಬಲ್ ನೇಮಕಾತಿಗೆ ಮಾತ್ರ ಇದು ಅನ್ವಯವಾಗಲಿದೆ. ರಾಜ್ಯ ಪೊಲೀಸ್ ಕಾನ್ಸ್ ಸ್ಟೇಬಲ್ ಗರಿಷ್ಟ ನೇಮಕ ವಯೋಮಿತಿ ಈ ಹಿಂದೆ ಒಂದು ಬಾರಿ ಹೆಚ್ಚಳ ಮಾಡಿದ್ದು, ಈಗ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಜಿಲ್ಲಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಕರೆಯಲಾಗಿದೆ. (ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3484 ಹುದ್ದೆಗಳಿವೆ. ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ.
ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ.@CMofKarnataka@DgpKarnataka pic.twitter.com/5X3JudW44K
— Araga Jnanendra (@JnanendraAraga) November 3, 2022
ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ವಯಸ್ಸಿಗೆ 35 ಹಾಗೂ ಇತರೆ ಅಭ್ಯರ್ಥಿಗಳಿಗೆ 33 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸಶಸ್ತ್ರ ಪಡೆಯ ಪೊಲೀಶ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷಗಳನ್ನು ನಿಗದಿ ಪಡಿಸಲಾಗಿದೆ.
ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:47 pm, Thu, 3 November 22