AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AI Job Boom: ಅಮೇರಿಕದಲ್ಲಿ AI ವೃತ್ತಿಪರರ ಕೊರತೆ: ಭಾರತೀಯ ವೃತ್ತಿಪರರಿಗೆ ಸುವರ್ಣಾವಕಾಶ!

ಬೈನ್ & ಕಂಪನಿಯ ವರದಿಯ ಪ್ರಕಾರ, ಮುಂದಿನ ಎರಡು ವರ್ಷಗಳಲ್ಲಿ ಅಮೆರಿಕದಲ್ಲಿ 13 ಲಕ್ಷಕ್ಕೂ ಹೆಚ್ಚು ಹೊಸ AI-ಸಂಬಂಧಿತ ಉದ್ಯೋಗಗಳು ಸೃಷ್ಟಿಯಾಗಲಿವೆ. ಆದಾಗ್ಯೂ, ಈ ವಲಯದಲ್ಲಿ ಇನ್ನೂ ನುರಿತ ವೃತ್ತಿಪರರ ಕೊರತೆಯಿದೆ.ಈ ಕೊರತೆಯಿಂದಾಗಿ ಭಾರತೀಯ AI ತಜ್ಞರಿಗೆ ಅಮೆರಿಕದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ. AI ಮತ್ತು ಕಂಪ್ಯೂಟರ್ ವಿಜ್ಞಾನ ಕಲಿತ ಭಾರತೀಯ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬಹುದು.

AI Job Boom: ಅಮೇರಿಕದಲ್ಲಿ AI ವೃತ್ತಿಪರರ ಕೊರತೆ: ಭಾರತೀಯ ವೃತ್ತಿಪರರಿಗೆ ಸುವರ್ಣಾವಕಾಶ!
Ai Job Boom
ಅಕ್ಷತಾ ವರ್ಕಾಡಿ
|

Updated on:Mar 12, 2025 | 3:20 PM

Share

ನೀವು ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದರೆ ಈ ಸುದ್ದಿ ನಿಮಗಾಗಿ. AI ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ವರದಿಗಳ ಪ್ರಕಾರ, ಮುಂಬರುವ ದಿನಗಳಲ್ಲಿ AI ನಿಂದ ಹೆಚ್ಚಿನ ಸಂಖ್ಯೆಯ ಉದ್ಯೋಗಗಳು ಸೃಷ್ಟಿಯಾಗಲಿವೆ. ಇತ್ತೀಚಿನ ವರದಿಯ ಪ್ರಕಾರ, ಮುಂದಿನ 2 ವರ್ಷಗಳಲ್ಲಿ ಅಮೆರಿಕ ಒಂದರಲ್ಲೇ ಲಕ್ಷಾಂತರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ.

ಬೈನ್ & ಕಂಪನಿಯ ವರದಿಯ ಪ್ರಕಾರ, ಮುಂದಿನ ಎರಡು ವರ್ಷಗಳಲ್ಲಿ ಅಮೆರಿಕದಲ್ಲಿ 13 ಲಕ್ಷಕ್ಕೂ ಹೆಚ್ಚು ಹೊಸ AI-ಸಂಬಂಧಿತ ಉದ್ಯೋಗಗಳು ಸೃಷ್ಟಿಯಾಗಲಿವೆ. ಆದಾಗ್ಯೂ, ಈ ವಲಯದಲ್ಲಿ ಇನ್ನೂ ನುರಿತ ವೃತ್ತಿಪರರ ಕೊರತೆಯಿದೆ, ಇದು ಈ ಉದ್ಯೋಗಗಳನ್ನು ಭರ್ತಿ ಮಾಡುವಲ್ಲಿ ದೊಡ್ಡ ಸವಾಲನ್ನು ಒಡ್ಡಬಹುದು.

ವೇಗವಾಗಿ ಬೆಳೆಯುತ್ತಿರುವ ಬೇಡಿಕೆ:

ಕಳೆದ ನಾಲ್ಕು ವರ್ಷಗಳಲ್ಲಿ, AI ಸಂಬಂಧಿತ ಉದ್ಯೋಗಗಳು ಪ್ರತಿ ವರ್ಷ ಶೇ. 21 ದರದಲ್ಲಿ ಹೆಚ್ಚಾಗಿದೆ. ವಿಶೇಷವೆಂದರೆ ಉದ್ಯೋಗಗಳು ಮಾತ್ರವಲ್ಲದೆ, AI ವೃತ್ತಿಪರರ ಸಂಬಳವೂ ಪ್ರತಿ ವರ್ಷ ಶೇ. 11 ರಷ್ಟು ಹೆಚ್ಚಳ ಕಂಡಿದೆ. ಇದರರ್ಥ ಆರೋಗ್ಯ ರಕ್ಷಣೆ, ಹಣಕಾಸು, ಉತ್ಪಾದನೆ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ AI ಗೆ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ.

ಇದನ್ನೂ ಓದಿ: ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಸುವರ್ಣವಕಾಶ; ತಿಂಗಳಿಗೆ 60 ಸಾವಿರ ರೂ. ಸಂಬಳ

ಅರ್ಧದಷ್ಟು ಹುದ್ದೆಗಳು ಖಾಲಿ:

2027 ರ ವೇಳೆಗೆ ಅಮೆರಿಕಕ್ಕೆ 13 ಲಕ್ಷ AI ತಜ್ಞರು ಬೇಕಾಗಿದ್ದು, ಅಲ್ಲಿನ ದೇಶದಲ್ಲಿ ವೃತ್ತಿಪರರನ್ನು ಹೊರತುಪಡಿಸಿ ಅಂದರೆ ಬಹುತೇಕ ಅರ್ಧದಷ್ಟು ಹುದ್ದೆಗಳು ಖಾಲಿ ಇರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಅಮೇರಿಕನ್ ಕಂಪನಿಗಳು ವಿದೇಶಿ ಪ್ರತಿಭೆಗಳನ್ನು ನೇಮಿಸಿಕೊಳ್ಳಬೇಕಾಗುತ್ತದೆ.

ಭಾರತೀಯರಿಗೆ ಸುವರ್ಣ ಅವಕಾಶ:

ಅಮೆರಿಕದಲ್ಲಿ ಕೃತಕ ಬುದ್ಧಿಮತ್ತೆ (AI) ಪ್ರತಿಭೆಗಳ ಕೊರತೆ ಇರುವುದರಿಂದ, ಭಾರತೀಯ ವೃತ್ತಿಪರರಿಗೆ ಅವಕಾಶಗಳು ತೆರೆದುಕೊಳ್ಳಬಹುದು. ಭಾರತೀಯ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟರ್ ವಿಜ್ಞಾನಕ್ಕೆ ಸಂಬಂಧಿಸಿದ ಕೋರ್ಸ್‌ಗಳನ್ನು ಕರಗತ ಮಾಡಿಕೊಂಡರೆ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಅವರಿಗೆ ಅತ್ಯುತ್ತಮ ವೃತ್ತಿ ಅವಕಾಶಗಳು ದೊರೆಯಲಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Wed, 12 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ