AIATSL Recruitment 2024: ಏರ್ ಇಂಡಿಯಾ ಏರ್ ಪೋರ್ಟ್ ಸರ್ವಿಸಸ್ ಲಿಮಿಟೆಡ್ನಲ್ಲಿ ಆಫೀಸರ್, ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಏರ್ ಇಂಡಿಯಾ ಏರ್ ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ 145 ಆಫೀಸರ್ ಮತ್ತು ಜೂನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸಂಬಂಧ ಪಟ್ಟಂತೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನಶ್ರೇಣಿ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಶುಲ್ಕ ಸೇರಿದಂತೆ ಹೆಚ್ಚಿನ ವಿವರಗಳನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ಏರ್ ಇಂಡಿಯಾ ಏರ್ ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಆಫೀಸರ್ ಮತ್ತು ಜೂನಿಯರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಇಲಾಖೆಯಲ್ಲಿ 145 ಆಫೀಸರ್ ಮತ್ತು ಜೂನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು ಆಸಕ್ತರು ಆಫ್ ಲೈನ್ ನಲ್ಲಿ ಜನವರಿ 6, 2025 ರೊಳಗೆ ಅರ್ಜಿ ಸಲ್ಲಿಸಿ ಉದ್ಯೋಗಗಿಟ್ಟಿಸಿ ಕೊಳ್ಳಬಹುದು.
ಹುದ್ದೆಗಳ ವಿವರ
* ಇಲಾಖೆ ಹೆಸರು : ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್
* ಹುದ್ದೆಗಳ ಹೆಸರು : ಆಫೀಸರ್ ಮತ್ತು ಜೂನಿಯರ್ ಆಫೀಸರ್
* ಒಟ್ಟು ಹುದ್ದೆಗಳು : 145
* ಉದ್ಯೋಗ ಸ್ಥಳ : ಮುಂಬೈ – ಮಹಾರಾಷ್ಟ್ರ
ಶೈಕ್ಷಣಿಕ ಅರ್ಹತೆಗಳು
* ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಆಫೀಸರ್ ಮತ್ತು ಜೂನಿಯರ್ ಆಫೀಸರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 50 ವರ್ಷ ದಾಟಿರಬಾರದು. ಮೀಸಲಾತಿ ಅನುಸಾರವಾಗಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ
ಆಫೀಸರ್ ಹಾಗೂ ಜೂನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಇತರೆ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮಾಜಿ ಸೈನಿಕರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ವಿಧಾನ
* ದೈಹಿಕ ಸಹಿಷ್ಣುತೆ ಪರೀಕ್ಷೆ
* ಸಂದರ್ಶನ
ಸಂದರ್ಶನ ನಡೆಯುವ ಸ್ಥಳ
ಮುಂಬೈ: ಎಐ ಏರ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್,
ಜಿಎಸ್ ಡಿ ಕಾಂಪ್ಲೆಕ್ಸ್, ಸಿಎಸ್ಎಂಐ ವಿಮಾನ ನಿಲ್ದಾಣ,
ಸಿಐಎಸ್ ಎಫ್ ಗೇಟ್ ನಂ.5 ಹತ್ತಿರ,
ಸಹರ್, ಅಂಧೇರಿ ಪೂರ್ವ, ಮುಂಬೈ -400099
ಪ್ರಮುಖ ದಿನಾಂಕಗಳು
*ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಡಿಸೆಂಬರ್ 2024
*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 6 ಜನವರಿ 2025
*ಸಂದರ್ಶನ ನಡೆಯುವ ದಿನಾಂಕ : 8 ಜನವರಿ 2025
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ