AIISH Mysore Recruitment 2023: ಮೈಸೂರಿನಲ್ಲಿದೆ ಉದ್ಯೋಗಾವಕಾಶ: ಪಿಯುಸಿ ಪಾಸಾದವರು ಕೂಡ ಅರ್ಜಿ ಸಲ್ಲಿಸಿ

| Updated By: ಝಾಹಿರ್ ಯೂಸುಫ್

Updated on: Jan 14, 2023 | 2:31 PM

AIISH Mysore Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

AIISH Mysore Recruitment 2023: ಮೈಸೂರಿನಲ್ಲಿದೆ ಉದ್ಯೋಗಾವಕಾಶ: ಪಿಯುಸಿ ಪಾಸಾದವರು ಕೂಡ ಅರ್ಜಿ ಸಲ್ಲಿಸಿ
Jobs
Follow us on

AIISH Mysore Recruitment 2023: ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್​-ಶ್ರವಣ ಸಂಸ್ಥೆ (AIISH) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಒಟ್ಟು 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಅಡ್ಮಿನಿಸ್ಟ್ರೇಟಿವ್ ಆಫೀಸರ್- 1 ಹುದ್ದೆ
  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 1 ಹುದ್ದೆ
  • ಆಡಿಯಾಲಜಿಸ್ಟ್​- 1 ಹುದ್ದೆ
  • ಮೆಡಿಕಲ್ ರೆಕಾರ್ಡ್​ ಟೆಕ್ನಿಷಿಯನ್- 1 ಹುದ್ದೆ
  • ಅಸಿಸ್ಟೆಂಟ್ (ಗ್ರೇಡ್-3)- 1 ಹುದ್ದೆ

ವಿದ್ಯಾರ್ಹತೆ:

ಇದನ್ನೂ ಓದಿ
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
  • ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳಿಗೆ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದು.
  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಹುದ್ದೆಗಳಿಗೆ ಡಿಪ್ಲೋಮಾ, ಬಿಇ/ಬಿ.ಟೆಕ್ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
  • ಆಡಿಯಾಲಜಿಸ್ಟ್​ ಹುದ್ದೆಗಳಿಗೆ ಬಿ.ಎಸ್ಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
  • ಮೆಡಿಕಲ್ ರೆಕಾರ್ಡ್​ ಟೆಕ್ನಿಷಿಯನ್ ಈ ಹುದ್ದೆಗಳಿಗೆ ಪದವಿ, ಡಿಪ್ಲೋಮಾ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಅಸಿಸ್ಟೆಂಟ್ (ಗ್ರೇಡ್-3) ಹುದ್ದೆಗಳಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು.

ವಯೋಮಿತಿ:

  • ಅಡ್ಮಿನಿಸ್ಟ್ರೇಟಿವ್ ಆಫೀಸರ್- ಈ ಹುದ್ದೆಗಳಿಗೆ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷದೊಳಗಿರಬೇಕು.
  • ಆಡಿಯಾಲಜಿಸ್ಟ್​- 30 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಮೆಡಿಕಲ್ ರೆಕಾರ್ಡ್​ ಟೆಕ್ನಿಷಿಯನ್- ಈ ಹುದ್ದೆಗಳಿಗೆ 27 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
  • ಅಸಿಸ್ಟೆಂಟ್ (ಗ್ರೇಡ್-3)- 27 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇನ್ನು ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಅರ್ಜಿ ಶುಲ್ಕ:

  • ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ- 100 ರೂ.
  • SC/ST ಅಭ್ಯರ್ಥಿಗಳಿಗೆ- 40 ರೂ.
  • ಮಹಿಳಾ ಮತ್ತು PWD ಅಭ್ಯರ್ಥಿಗಳಿಗೆ- ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಎರಡು ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 24, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಇದಕ್ಕಾಗಿ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Office of Chief Administrative Officer,

All India Institute of Speech and Hearing,

Manasagangothri, Mysore – 570006

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.