Air India Recruitment 2023: ಪಿಯುಸಿ ಪಾಸಾದವರಿಗೆ ಏರ್ ಇಂಡಿಯಾದಲ್ಲಿದೆ ಉದ್ಯೋಗಾವಕಾಶ
Air India Recruitment 2023: ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಸಂದರ್ಶನದಲ್ಲಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕಾಗುತ್ತದೆ.
Air India Recruitment 2023: ಏರ್ ಇಂಡಿಯಾ ಲಿಮಿಟೆಡ್ ಮಹಿಳಾ ಕ್ಯಾಬಿನ್ ಕ್ರ್ಯೂ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೇರ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 22 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಸಂಸ್ಥೆಯ ಹೆಸರು: ಏರ್ ಇಂಡಿಯಾ ಲಿಮಿಟೆಡ್
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
- ಹುದ್ದೆಯ ಹೆಸರು: ಕ್ಯಾಬಿನ್ ಸಿಬ್ಬಂದಿ
ಶೈಕ್ಷಣಿಕ ಅರ್ಹತೆ:
ಏರ್ ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಯು ಕನಿಷ್ಠ 18 ಮತ್ತು ಗರಿಷ್ಠ 27 ವರ್ಷಗಳ ಒಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಸಂದರ್ಶನದಲ್ಲಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕಾಗುತ್ತದೆ.
ಇದನ್ನೂ ಓದಿ: KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
ಸಂದರ್ಶನ ನಡೆಯುವ ಸ್ಥಳ:
ITC Fortune Park, JP Celestial 5, 43, Race Course Road, Near Anand Rao Circle, Racecourse, Gandhi Nagar, Bengaluru -560009
ಪ್ರಮುಖ ದಿನಾಂಕ:
ನೇರ ಸಂದರ್ಶನ ನಡೆಯುವ ದಿನಾಂಕ: 22-06-2023
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ಸಂದರ್ಶನಕ್ಕಾಗಿ ಹೆಸರು ನೋಂದಾಯಿಸಿಕೊಳ್ಳಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: airindia.in