AOC Recruitment 2024 : ಭಾರತೀಯ ಸೇನೆಯಲ್ಲಿ 188 ಸೀನಿಯರ್ ಮೆಟೀರಿಯಲ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ
ಭಾರತೀಯ ಸೀನಿಯರ್ ಮೆಟೀರಿಯಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸೇರಿದಂತೆ ಇತರೆ ಎಲ್ಲಾ ಮಾಹಿತಿಯು ಈ ಕೆಳಗಿದೆ.
ಭಾರತೀಯ ಸೇನೆಯಲ್ಲಿ ಕೆಲಸ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ಹೌದು, ಭಾರತೀಯ ಸೇನೆಯಲ್ಲಿ ಖಾಲಿ ಇರುವ ಸೀನಿಯರ್ ಮೆಟೀರಿಯಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 188 ಹುದ್ದೆಗಳು ಖಾಲಿಯಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ನೀಡಿರುವ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
* ಇಲಾಖೆ ಹೆಸರು : ಭಾರತೀಯ ಸೇನೆ
* ಹುದ್ದೆಗಳ ಹೆಸರು : ಸೀನಿಯರ್ ಮೆಟೀರಿಯಲ್ ಅಸಿಸ್ಟೆಂಟ್ ಹುದ್ದೆಗಳು
* ಒಟ್ಟು ಹುದ್ದೆಗಳ ಸಂಖ್ಯೆ : 188
* ಉದ್ಯೋಗ ಸ್ಥಳ – ಭಾರತಾದ್ಯಂತ
ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿ
* ಸೀನಿಯರ್ ಮೆಟೀರಿಯಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರವಾಗಿ ಡಿಪ್ಲೊಮಾ, ಪದವಿ/ ಸ್ನಾತಕೋತ್ತರ ಪದವಿ (ಅರ್ಥಶಾಸ್ತ್ರ/ವಾಣಿಜ್ಯ/ ಅಂಕಿಅಂಶ/ ವ್ಯವಹಾರ ಅಧ್ಯಯನ/ ಸಾರ್ವಜನಿಕ ಆಡಳಿತ) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ರೂ.35,400/-ರೂ ಗಳಿಂದ 112,100/- ರೂ ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
ಇದನ್ನೂ ಓದಿ: ವಾಯುವ್ಯ ರೈಲ್ವೆಯಲ್ಲಿ ಖಾಲಿಯಿರುವ 1791 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಆಯ್ಕೆ ವಿಧಾನ
ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11- ನವೆಂಬರ್ -2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10- ಜನವರಿ -2025
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ