ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್​ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ರುಡ್ಸೆಟ್ ಸಂಸ್ಥೆಯು ಬೆಂಗಳೂರಿನಲ್ಲಿ 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಹೊಲಿಗೆ ತರಬೇತಿಯನ್ನು ನೀಡುತ್ತಿದೆ. 18-45 ವರ್ಷದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಆದ್ಯತೆ. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನಾಂಕವಾಗಿದೆ.

ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್​ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್​ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 04, 2024 | 8:42 PM

ಬೆಂಗಳೂರು, ಡಿಸೆಂಬರ್ 04: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್​ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ (Fashion Design, Tailoring) ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 10 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್​ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ: ಕೆಲಸ ಕೊಡೋದ್ರಲ್ಲಿ ಬೆಂಗಳೂರು ನಂ. 1; ಭವಿಷ್ಯದ ಜಾಬ್ ಮಾರ್ಕೆಟ್ ಆಗುತ್ತಿವೆ ಈ ಸಣ್ಣ ನಗರಗಳು

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541 ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:14 pm, Wed, 4 December 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!