ಬೆಂಗಳೂರು, ಡಿಸೆಂಬರ್ 04: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ (Fashion Design, Tailoring) ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 10 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: ಕೆಲಸ ಕೊಡೋದ್ರಲ್ಲಿ ಬೆಂಗಳೂರು ನಂ. 1; ಭವಿಷ್ಯದ ಜಾಬ್ ಮಾರ್ಕೆಟ್ ಆಗುತ್ತಿವೆ ಈ ಸಣ್ಣ ನಗರಗಳು
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541 ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:14 pm, Wed, 4 December 24