ನಿರುದ್ಯೋಗಿಗಳಿಗೆ ಸುವರ್ಣವಕಾಶ: ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ತರಬೇತಿಗೆ ಅರ್ಜಿ ಆಹ್ವಾನ

ಮೊಬೈಲ್​ ರಿಪೇರಿ ರೀತಿ ನಿರುದ್ಯೋಗಿಗಳಿಗೆ ಚಕ್ರ(ಬೈಕ್) ವಾಹನ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಉದ್ಯೋಗ ನಿರೀಕ್ಷೆಯಲ್ಲಿರುವ ಆಸಕ್ತ ನಿರುದ್ಯೋಗಿ ಯುವಕರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಯಾವಾಗಿನಿಂದ ಟ್ರೈನಿಂಗ್ ಶುರುವಾಗುತ್ತೆ? ಅರ್ಹತೆ ಏನು ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ ನೋಡಿ.

ನಿರುದ್ಯೋಗಿಗಳಿಗೆ ಸುವರ್ಣವಕಾಶ: ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ತರಬೇತಿಗೆ ಅರ್ಜಿ ಆಹ್ವಾನ
ಬೈಕ್
Follow us
ರಮೇಶ್ ಬಿ. ಜವಳಗೇರಾ
|

Updated on: Jul 08, 2024 | 9:58 PM

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಲಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ ವಯೋಮಾನವದವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಇದನ್ನೂ ಓದಿ: ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು. ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ : 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ