Recruitment: ಬೆಂಗಳೂರು ಗ್ರಾಮಾಂತರದಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯ, 714, ನೆಲ ಮಹಡಿ, 5ನೇ ಮುಖ್ಯ ರಸ್ತೆ, 10ನೇ ಕ್ರಾಸ್, ಎಂ.ಸಿ. ಲೇಔಟ್, ವಿಜಯನಗರ, ಬೆಂಗಳೂರು-560040 ಹಾಗೂ ದೂರವಾಣಿ ಸಂಖ್ಯೆ: 080-2335 2460 ಅನ್ನು ಸಂಪರ್ಕಿಸಬಹುದಾಗಿದೆ

Recruitment: ಬೆಂಗಳೂರು ಗ್ರಾಮಾಂತರದಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರದಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
TV9kannada Web Team

| Edited By: sadhu srinath

Mar 09, 2022 | 8:05 PM

ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bengaluru rural district) ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗಳಿಗೆ (recruitment of Library supervisors) ತಾತ್ಕಾಲಿಕವಾಗಿ ಗೌರವ ಸಂಭಾವನೆ ಆಧಾರದ ಮೇಲೆ ಕನಿಷ್ಠ ಎಸ್.ಎಸ್.ಎಲ್.ಸಿ ಪೂರೈಸಿರುವ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೊಸಕೋಟೆ ತಾಲ್ಲೂಕಿನ ಶಿವನಾಪುರ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಪರಿಶಿಷ್ಟ ಜಾತಿ (ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ), ಕಂಬಳೀಪುರ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಸಾಮಾನ್ಯ ಅಭ್ಯರ್ಥಿ ಹಾಗೂ ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು 2022ರ ಏಪ್ರಿಲ್ 06 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯ, 714, ನೆಲ ಮಹಡಿ, 5ನೇ ಮುಖ್ಯ ರಸ್ತೆ, 10ನೇ ಕ್ರಾಸ್, ಎಂ.ಸಿ. ಲೇಔಟ್, ವಿಜಯನಗರ, ಬೆಂಗಳೂರು-560040 ಹಾಗೂ ದೂರವಾಣಿ ಸಂಖ್ಯೆ: 080-2335 2460 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read: Sainik School Recruitment 2022: ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Also Read: ವಿಧಾನ ಸಭೆಯಲ್ಲಿ ಈಗಲ್ಟನ್ ರೆಸಾರ್ಟ್ ಖರೀದಿ ವ್ಯವಹಾರದ ಇಂಚಿಂಚೂ ಮಾಹಿತಿ ತೆರೆದಿಟ್ಟ ಜೆಡಿಎಸ್ ನಾಯಕ ಕುಮಾರಸ್ವಾಮಿ

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada