Public Prosecutor Recruitment: ಗುತ್ತಿಗೆ ಆಧಾರದಲ್ಲಿ ವಕೀಲರ ನೇಮಕಾತಿ -ಅರ್ಜಿ ಆಹ್ವಾನ, ಮಾರ್ಚ್ 7 ಕೊನೆಯ ದಿನ
ಅರ್ಜಿ ಸಲ್ಲಿಸಲು ಮಾರ್ಚ್ 07 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಅರ್ಜಿಯೊಂದಿಗೆ ಪ್ರತಿ ವರ್ಷದ ಕಾನೂನು ಪದವಿಯ ಅಂಕಪಟ್ಟಿಗಳು, ಭಾರತ ದೇಶದ ಮಾನ್ಯತೆ ಪಡೆದ ಯಾವುದೇ ವಕೀಲ ವೃತ್ತಿ ನಡೆಸುವ ಬಗ್ಗೆ ಪಡೆದ ಸನ್ನದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿಗಳು, ಜಾತಿ ಮತ್ತು ಆದಾಯದ ಅನ್ವಯ ಮೀಸಲಾತಿ ಸೌಲಭ್ಯವನ್ನು ಪಡೆಯಲಿಚ್ಛಿಸುವವರು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಕೊಪ್ಪಳ: ಜಿಲ್ಲೆಯ ಕುಷ್ಟಗಿ ಹಾಗೂ ಕೊಪ್ಪಳ ಅಪರ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ 02 ಹುದ್ದೆಗಳನ್ನು (Assistant public prosecutor) ಗುತ್ತಿಗೆ ಆಧಾರದ ಮೇಲೆ (Contract Basis) ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದ್ದು, ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ಪದವೀಧರರಾಗಿದ್ದು, ಯಾವುದೇ ನ್ಯಾಯಾಲಯಗಳಲ್ಲಿ ಮೂರು ವರ್ಷ ಕಾಲ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್ 07 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಾವು ವಕೀಲ ವೃತ್ತಿ ನಡೆಸುತ್ತಿರುವ ಬಗ್ಗೆ ಆಯಾ ನ್ಯಾಯಾಲಯದ ನ್ಯಾಯಪೀಠಾಧಿಕಾರಿಗಳಿಂದ ಪಡೆದ ಪ್ರಮಾಣಪತ್ರವನ್ನು ಅರ್ಜಿಯೊಡನೆ ಕಡ್ಡಾಯವಾಗಿ ಲಗತ್ತಿಸಬೇಕು.
ಆಯ್ಕೆಗೊಂಡ ಅಭ್ಯರ್ಥಿಗಳು ತಾವು ಪ್ರಸ್ತುತ ವಕೀಲ ವೃತ್ತಿಯನ್ನು ನಡೆಸುತ್ತಿರುವ ಸ್ಥಳವನ್ನು ಹೊರತುಪಡಿಸಿ ಕೊಪ್ಪಳ ಜಿಲ್ಲೆಯಲ್ಲಿನ ಬೇರೆ ನ್ಯಾಯಾಲಯಗಳಲ್ಲಿ, ನೆರೆಯ ಜಿಲ್ಲೆಯ ನ್ಯಾಯಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಮಾರ್ಚ್ 07 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಅರ್ಜಿಯೊಂದಿಗೆ ಪ್ರತಿ ವರ್ಷದ ಕಾನೂನು ಪದವಿಯ ಅಂಕಪಟ್ಟಿಗಳು, ಭಾರತ ದೇಶದ ಮಾನ್ಯತೆ ಪಡೆದ ಯಾವುದೇ ವಕೀಲ ವೃತ್ತಿ ನಡೆಸುವ ಬಗ್ಗೆ ಪಡೆದ ಸನ್ನದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿಗಳು, ಜಾತಿ ಮತ್ತು ಆದಾಯದ ಅನ್ವಯ ಮೀಸಲಾತಿ ಸೌಲಭ್ಯವನ್ನು ಪಡೆಯಲಿಚ್ಛಿಸುವವರು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಗುತ್ತಿಗೆ ಆಧಾರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕಾಲ ಕಾಲಕ್ಕೆ ಸರ್ಕಾರದ/ಅಭಿಯೋಗದ ನಿರ್ದೇಶಕರು ನೀಡುವ ನಿರ್ದೇಶನ, ಸೂಚನೆಗಳನ್ನು ಪಾಲಿಸತಕ್ಕದ್ದು. ಅಭ್ಯರ್ಥಿಯು ಆದೇಶದಲ್ಲಿನ ಯಾವುದೇ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ಸರ್ಕಾರಕ್ಕೆ ಕಂಡುಬಂದಲ್ಲಿ ಅಂತಹ ಅಭ್ಯರ್ಥಿಯನ್ನು ಯಾವುದೇ ಪೂರ್ವ ಸೂಚನೆ ಇಲ್ಲದೆ ಹುದ್ದೆಯಿಂದ ತೆಗೆದು ಹಾಕಲಾಗುವುದು.
ಗುತ್ತಿಗೆ ಆಧಾರದಲ್ಲಿನ ಸೇವೆಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಯಾವುದೇ ಸಂದರ್ಭದಲ್ಲೂ ಖಾಯಂಗೊಳಿಸಲು ಅವಕಾಶವಿರುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಪ್ರಧಾನ ಸರ್ಕಾರಿ ಅಭಿಯೋಜಕರಾದ ಬಂಡಿ ಅಪರ್ಣಾ ಮನೋಹರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also Read: Yeshasvini Scheme: ಯಶಸ್ವಿನಿ ಆರೋಗ್ಯ ಯೋಜನೆಗೆ ಮರುಜೀವ ತುಂಬಿದ ಸಿಎಂ ಬೊಮ್ಮಾಯಿ: ಹರೀಶ್ ಬಿಜ್ಜೂರ್ ಸಂತಸ
Published On - 7:16 pm, Fri, 4 March 22