AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSF Constable Recruitment: ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕ್ರೀಡಾ ಕೋಟಾದಲ್ಲಿ 241 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆಗಸ್ಟ್ 20 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯಿಲ್ಲದೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ.

BSF Constable Recruitment: ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ
Bsf Sports Quota Constable Recruitment
ಅಕ್ಷತಾ ವರ್ಕಾಡಿ
|

Updated on: Jul 27, 2025 | 2:18 PM

Share

ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ನಾನ್-ಗೆಜೆಟೆಡ್ ಮತ್ತು ನಾನ್-ಮಿನಿಸ್ಟೀರಿಯಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 241 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆಗಸ್ಟ್ 20 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಈಜು, ಡೈವಿಂಗ್, ವಾಟರ್ ಪೋಲೋ, ಬ್ಯಾಸ್ಕೆಟ್‌ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಕ್ರಾಸ್ ಕಂಟ್ರಿ, ಈಕ್ವೆಸ್ಟ್ರಿಯನ್, ಫುಟ್‌ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್‌ಬಾಲ್, ಹಾಕಿ, ಐಸ್-ಸ್ಕೀಯಿಂಗ್, ಜೂಡೋ, ಕರಾಟೆ, ವಾಲಿಬಾಲ್, ವೇಟ್‌ಲಿಫ್ಟಿಂಗ್, ವಾಟರ್ ಸ್ಪೋರ್ಟ್ಸ್, ಕುಸ್ತಿ, ಶೂಟಿಂಗ್, ಟೇಕ್ವಾಂಡೋ, ವುಶು, ಫೆನ್ಸಿಂಗ್, ಕಯಾಕಿಂಗ್, ಕ್ಯಾನೋಯಿಂಗ್ (ಬೋಟ್ ರೇಸಿಂಗ್), ರೋಯಿಂಗ್, ಟೇಬಲ್ ಟೆನಿಸ್ ಮುಂತಾದ ಕ್ರೀಡೆಗಳಲ್ಲಿ ಪ್ರವೀಣರಾಗಿರಬೇಕು. ಅವರು ಸಂಬಂಧಿತ ಕ್ರೀಡೆಗಳಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು. ಅವರು 10 ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸಿನ ಮಿತಿ ಆಗಸ್ಟ್ 01, 2025 ರಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್, ಲೋಡರ್ ಹುದ್ದೆಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು

ಆಸಕ್ತ ಅಭ್ಯರ್ಥಿಗಳು ಆಗಸ್ಟ್ 20, 2025 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 147 ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಂತಿಮ ಆಯ್ಕೆಯು ಅರ್ಜಿಗಳ ಕಿರುಪಟ್ಟಿ, ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್‌ಟಿ), ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಆಧರಿಸಿರುತ್ತದೆ. ಅಂದರೆ, ಯಾವುದೇ ಲಿಖಿತ ಪರೀಕ್ಷೆಯನ್ನು ನಡೆಸದೆ ಆಯ್ಕೆಯನ್ನು ಮಾಡಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ