Apply Now: ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗೆ ನೇಮಕಾತಿ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (DYES) ಕರ್ನಾಟಕವು 6 ಮಾರ್ಗದರ್ಶಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಮೈಸೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಅರ್ಜಿ ಸಲ್ಲಿಸಿ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು (DYES Karnataka) ಅಧಿಕೃತ ಅಧಿಸೂಚನೆಯ ಮೂಲಕ ಮೆಂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 12ರ ಮೊದಲು ಅರ್ಜಿ ಸಲ್ಲಿಸಿ.
ಹುದ್ದೆಯ ಅಧಿಸೂಚನೆ:
- ಸಂಸ್ಥೆಯ ಹೆಸರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ (DYES Karnataka)
- ಹುದ್ದೆಗಳ ಸಂಖ್ಯೆ: 06
- ಉದ್ಯೋಗ ಸ್ಥಳ: ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು
- ಹುದ್ದೆಯ ಹೆಸರು: ಮಾರ್ಗದರ್ಶಕರು(Mentor)
ಹುದ್ದೆಯ ಅಧಿಸೂಚನೆ:
| ವಿಭಾಗದ ಹೆಸರು | ಪೋಸ್ಟ್‌ಗಳ ಸಂಖ್ಯೆ |
| ಬೆಂಗಳೂರು ನಗರ ವಿಭಾಗ | 1 |
| ಬೆಳಗಾವಿ ವಿಭಾಗ | 1 |
| ಕಲಬುರಗಿ | 1 |
| ಮೈಸೂರು | 1 |
| ಕೂಡಿಗೆ ಕ್ರೀಡಾ ಶಾಲೆ | 1 |
| ವಿದ್ಯಾನಗರ್ ತರಬೇತಿ ಕೇಂದ್ರ | 1 |
ಇದನ್ನೂ ಓದಿ: ರೈಲ್ವೆಯಲ್ಲಿ ಸೆಕ್ಷನ್ ಕಂಟ್ರೋಲರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಹರು
ಅರ್ಜಿ ಸಲ್ಲಿಸುವ ಹಂತಗಳು:
- ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. ಅಧಿಕೃತ ವೆಬ್ಸೈಟ್ ಲಿಂಕ್
- ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:- ಮಹಾನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001, ಕರ್ನಾಟಕ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:37 pm, Fri, 19 September 25




