AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSC CGL 2025: ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; 14,582 ಹುದ್ದೆಗಳಿಗೆ ಬಂಪರ್​​ ನೇಮಕಾತಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2025-26 ನೇ ಸಾಲಿನ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಪರೀಕ್ಷೆಗೆ ಅಧಿಸೂಚನೆ ಬಿಡುಗಡೆಯಾಗಿದೆ. 14,582 ಹುದ್ದೆಗಳಿಗೆ ಜುಲೈ 4 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪದವಿ ಪಡೆದವರು ಅರ್ಹರು. ವಯೋಮಿತಿ 18-30 ವರ್ಷಗಳು. ಟೈಯರ್-I ಪರೀಕ್ಷೆ ಆಗಸ್ಟ್ 13-30, ಟೈಯರ್-II ಪರೀಕ್ಷೆ ಡಿಸೆಂಬರ್ ನಲ್ಲಿ ನಡೆಯಲಿದೆ. ವೇತನ ರೂ. 25,500 ರಿಂದ ರೂ. 1,42,400.

SSC CGL 2025: ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; 14,582 ಹುದ್ದೆಗಳಿಗೆ ಬಂಪರ್​​ ನೇಮಕಾತಿ
Ssc Cgl 2025 Recruitment
ಅಕ್ಷತಾ ವರ್ಕಾಡಿ
|

Updated on:Jun 11, 2025 | 2:50 PM

Share

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2025-26 ನೇ ಸಾಲಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಪರೀಕ್ಷಾ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 14,582 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪದವಿ ಅರ್ಹತೆ ಹೊಂದಿರುವ ಯಾರಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಜುಲೈ 4 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ಪಡೆದಿರಬೇಕು. ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್ ಹುದ್ದೆಗಳಿಗೆ, ಅವರು ಇಂಟರ್‌ನಲ್ಲಿ ಗಣಿತವನ್ನು ಶೇಕಡಾ 60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಪದವಿ ಮಟ್ಟದಲ್ಲಿ ಸಂಖ್ಯಾಶಾಸ್ತ್ರವನ್ನು ಉತ್ತೀರ್ಣರಾಗಿರಬೇಕು. ತಮ್ಮ ಪದವಿಯ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸಹ ಅರ್ಹರು. ಅಭ್ಯರ್ಥಿಗಳ ವಯಸ್ಸಿನ ಮಿತಿ ಆಗಸ್ಟ್ 01, 2025 ರಂತೆ 18 ರಿಂದ 30 ವರ್ಷಗಳ ನಡುವಿನವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು . ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ಜುಲೈ 04 ಎಂದು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಭಾರತೀಯ ವಾಯುಪಡೆಯಲ್ಲಿ ಕೆಲಸ ಪಡೆಯಲು ಸುವರ್ಣವಕಾಶ; ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 100 ಪಾವತಿಸಬೇಕಾಗುತ್ತದೆ. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಹಿಳೆಯರು/ಇಎಸ್‌ಎಂ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಶುಲ್ಕ ಪಾವತಿಗೆ ಜುಲೈ 5, 2025 ರವರೆಗೆ ಅವಕಾಶವಿರುತ್ತದೆ. ಅಂತಿಮ ಆಯ್ಕೆಯು ಟೈಯರ್-I, ಟೈಯರ್-II ಪರೀಕ್ಷೆಗಳು ಮತ್ತು ದಾಖಲೆ ಪರಿಶೀಲನೆಯನ್ನು ಆಧರಿಸಿರುತ್ತದೆ. ಟೈಯರ್-I ಪರೀಕ್ಷೆಯು ಈ ವರ್ಷ ಆಗಸ್ಟ್ 13 ರಿಂದ 30 ರವರೆಗೆ ನಡೆಯಲಿದೆ. ಟೈಯರ್ 2 ಪರೀಕ್ಷೆಯು ಡಿಸೆಂಬರ್ 2025 ರಲ್ಲಿ ನಡೆಯಲಿದೆ. ಆಯ್ಕೆಯಾದವರಿಗೆ ತಿಂಗಳಿಗೆ ರೂ. 25,500 ರಿಂದ ರೂ. 1,42,400 ರವರೆಗೆ ವೇತನವನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ: ಇಲ್ಲಿ ಕ್ಲಿಕ್​ ಮಾಡಿ

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Wed, 11 June 25

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!