Assam Rifles Recruitment 2022: 10ನೇ ಮತ್ತು ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನ

ಅಸ್ಸಾಂ ರೈಫಲ್ಸ್​ನಲ್ಲಿ ಖಾಲಿ ಇರುವ ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, 10ನೇ ಮತ್ತು ದ್ವಿತೀಯ ಪಿಯುಸಿ ಪಾಸ್ ಆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ.

Assam Rifles Recruitment 2022: 10ನೇ ಮತ್ತು ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನ
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Jun 10, 2022 | 4:59 PM

ಅಸ್ಸಾಂ ರೈಫಲ್ಸ್​ (Assam Rifles)ನಲ್ಲಿ ಖಾಲಿ ಇರುವ ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮನ್ ಹುದ್ದೆಗಳಿಗೆ ನೇಮಕಾತಿ (Recruitment) ಮಾಡಿಕೊಳ್ಳುತ್ತಿದ್ದು, 10ನೇ ಮತ್ತು ದ್ವಿತೀಯ ಪಿಯುಸಿ ಪಾಸ್ ಆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಸ್ಸಾಂ ರೈಫಲ್ಸ್‌ನ ಅಧಿಕೃತ ವೆಬ್‌ಸೈಟ್ assamrifles.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: BEL Recruitment 2022: ಬಿಇಎಲ್​ ನೇಮಕಾತಿ: ವೇತನ 40 ಸಾವಿರ ರೂ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ಮತ್ತು 12ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಇತರ ವಿದ್ಯಾರ್ಹತೆಗಳನ್ನು ಹೊಂದಿರಬೇಕು. ಇದಲ್ಲದೆ, ಕೆಲವು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿಯನ್ನು ಹೊಂದಿರಬೇಕು. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಬಹುದು.

ಅರ್ಜಿ ಶುಲ್ಕ ಮತ್ತು ವಯಸ್ಸಿನ ಮಿತಿ

ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಆಫ್‌ಲೈನ್‌ನಲ್ಲಿ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1 ಆಗಸ್ಟ್ 1999 ಕ್ಕಿಂತ ಮೊದಲು ಮತ್ತು 1 ಆಗಸ್ಟ್ 2004 ಕ್ಕಿಂತ ನಂತರ ಜನಿಸಿರಬಾರದು. ಗರಿಷ್ಠ ವಯೋಮಿತಿಯಲ್ಲಿ SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: SIDBI Jobs: ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ಟ್ರೇಡ್ ಟೆಸ್ಟ್ (ಕೌಶಲ್ಯ) ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ