Recruitment 2022: ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Mar 16, 2022 | 8:37 PM

Army Public School Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್ಮಿ ಪಬ್ಲಿಕ್ ಸ್ಕೂಲ್‌ನ ಅಧಿಕೃತ ವೆಬ್‌ಸೈಟ್ apsnoida.edu.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Recruitment 2022: ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Army Public School Recruitment 2022
Follow us on

Army Public School Recruitment 2022: ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ PRT, TGT ಮತ್ತು PGT ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್ಮಿ ಪಬ್ಲಿಕ್ ಸ್ಕೂಲ್‌ನ ಅಧಿಕೃತ ವೆಬ್‌ಸೈಟ್ apsnoida.edu.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Army Public School Recruitment 2022: ಹುದ್ದೆಗಳ ವಿವರಗಳು:
PRT
TGT
PGT

Army Public School Recruitment 2022: ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಲ್ಲದೆ ಇಂಗ್ಲಿಷ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪ್ರಾವೀಣ್ಯತೆ ಹೊಂದಿರುವುದು ಕಡ್ಡಾಯವಾಗಿದೆ.

Army Public School Recruitment 2022: ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂ. 100 ಪಾವತಿಸಬೇಕಾಗುತ್ತದೆ.

Army Public School Recruitment 2022: ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Army Public School Recruitment 2022: ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21 ಮಾರ್ಚ್ 2022

Army Public School Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು  .

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 8:26 pm, Wed, 16 March 22