AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Recruitment 2023: ಆಯುಷ್ ಇಲಾಖೆ ನೇಮಕಾತಿ: 10ನೇ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

Ayush Department Hassan Recruitment 2023: ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 19 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Recruitment 2023: ಆಯುಷ್ ಇಲಾಖೆ ನೇಮಕಾತಿ: 10ನೇ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ
Jobs
TV9 Web
| Edited By: |

Updated on:Mar 21, 2023 | 2:39 PM

Share

ಮುಖ್ಯಾಂಶಗಳು

  • ಹಾಸನದ ಆಯುಷ್ ಇಲಾಖೆಯ ನೇಮಕಾತಿ ಅಡಿಯಲ್ಲಿ ಒಟ್ಟು 18 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
  • ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • 10ನೇ ತರಗತಿಯಲ್ಲಿ ಪಾಸಾದವರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

Ayush Department Hassan Recruitment 2023: ಹಾಸನದ ಆಯುಷ್ ಇಲಾಖೆಯು ಸ್ಪೆಷಲಿಸ್ಟ್ ಡಾಕ್ಟರ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 18 CHO, ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 19 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು? ಆಯ್ಕೆಯಾದರೆ ಸಿಗುವ ಮಾಸಿಕ ವೇತನ ಎಷ್ಟು? ಶೈಕ್ಷಣಿಕ ಅರ್ಹತೆಗಳೇನು? ವಯೋಮಿತಿ ಎಷ್ಟು? ಎಂಬಿತ್ಯಾದಿ ಪ್ರಶ್ನೆಗಳಿಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಆಯುಷ್ ಇಲಾಖೆ ಹಾಸನ
  • ಹುದ್ದೆಗಳ ಸಂಖ್ಯೆ: 18
  • ಉದ್ಯೋಗ ಸ್ಥಳ: ಹಾಸನ – ಕರ್ನಾಟಕ
  • ಹುದ್ದೆ ಹೆಸರು: CHO, ಸ್ಪೆಷಲಿಸ್ಟ್ ಡಾಕ್ಟರ್

ಹುದ್ದೆಗಳ ವಿಭಾಗವಾರು ಮಾಹಿತಿ:

  • ತಜ್ಞ ವೈದ್ಯರು- 3 ಹುದ್ದೆಗಳು
  • ಫಾರ್ಮಾಸಿಸ್ಟ್- 7 ಹುದ್ದೆಗಳು
  • ಮಸಾಜಿಸ್ಟ್- 3 ಹುದ್ದೆಗಳು
  • ಕ್ಷರಸೂತ್ರ ಅಟೆಂಡರ್- 1 ಹುದ್ದೆ
  • ಸ್ತ್ರೀರೋಗ ಅಟೆಂಡರ್- 1 ಹುದ್ದೆ
  • ವಿವಿಧೋದ್ದೇಶ ಕೆಲಸಗಾರ- 1 ಹುದ್ದೆ
  • ಸಮುದಾಯ ಆರೋಗ್ಯ ಅಧಿಕಾರಿ (CHO)- 2 ಹುದ್ದೆಗಳು

ಶೈಕ್ಷಣಿಕ ಅರ್ಹತೆಗಳು:

  • ತಜ್ಞ ವೈದ್ಯರು- BNYS, BAMS, MD, MS, ಸ್ನಾತಕೋತ್ತರ ಪದವಿ ಮಾಡಿರಬೇಕು.
  • ಫಾರ್ಮಾಸಿಸ್ಟ್- 10ನೇ ತರಗತಿ ಪಾಸಾಗಿರಬೇಕು. ಅಥವಾ ಡಿಪ್ಲೊಮಾ ಮಾಡಿರಬೇಕು.
  • ಮಸಾಜಿಸ್ಟ್- 07ನೇ ತಗರತಿ ಪಾಸಾಗಿರಬೇಕು.
  • ಕ್ಷರಸೂತ್ರ ಅಟೆಂಡರ್- 10ನೇ ತರಗತಿ ಪಾಸಾಗಿರಬೇಕು.
  • ಸ್ತ್ರೀರೋಗ ಅಟೆಂಡರ್- 10ನೇ ತರಗತಿ ಪಾಸಾಗಿರಬೇಕು.
  • ವಿವಿಧೋದ್ದೇಶ ಕೆಲಸಗಾರ- 10ನೇ ತರಗತಿ ಪಾಸಾಗಿರಬೇಕು.
  • ಸಮುದಾಯ ಆರೋಗ್ಯ ಅಧಿಕಾರಿ (CHO)- BAMS ಮಾಡಿರಬೇಕು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.10300 ರಿಂದ 35000/- ರೂ.ವರೆಗೆ ಮಾಸಿಕ ವೇತನ ಸಿಗಲಿದೆ.

ವಯೋಮಿತಿ:

ಆಯುಷ್ ಇಲಾಖೆ ಹಾಸನ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ 18 ವರ್ಷದಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

  • SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
  • Cat-I/2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷಗಳು

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 19, 2023

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಂದರೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಪ್ರಮುಖ ದಾಖಲಾತಿ ಪ್ರತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

District Ayush Office, Penshan Mohalla, Hassan, Karnataka, 573201

ಈ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕ್‌ಗಳು:

Published On - 2:38 pm, Tue, 21 March 23

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್