AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCC Bank Recruitment 2023: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 52 ಸಾವಿರ ರೂ.

Bangalore DCC Bank Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್​ bengalurudccbank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

DCC Bank Recruitment 2023: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 52 ಸಾವಿರ ರೂ.
Bangalore DCC Bank Recruitment
TV9 Web
| Edited By: |

Updated on: Feb 06, 2023 | 2:35 PM

Share

Bangalore DCC Bank Recruitment 2023: ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ನ (BDCCB) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಸ್ಟೆನೋಗ್ರಾಫರ್, ಕಂಪ್ಯೂಟರ್ ಆಪರೇಟರ್, ಡ್ರೈವರ್, ಜೆಎ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್​ bengalurudccbank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಬ್ರಾಂಚ್ ಮ್ಯಾನೇಜರ್- 4 ಹುದ್ದೆಗಳು
  • ಹಿರಿಯ ಸಹಾಯಕ- 19 ಹುದ್ದೆಗಳು
  • ಸ್ಟೆನೋಗ್ರಾಫರ್ಸ್- 1 ಹುದ್ದೆ
  • ಕಿರಿಯ ಸಹಾಯಕರು- 43 ಹುದ್ದೆಗಳು
  • ಕಂಪ್ಯೂಟರ್ ಆಪರೇಟರ್- 2 ಹುದ್ದೆ
  • ಚಾಲಕ- 4 ಹುದ್ದೆಗಳು
  • ಗ್ರೂಪ್ ಡಿ- 23 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 96

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಬ್ರಾಂಚ್ ಮ್ಯಾನೇಜರ್, ಹಿರಿಯ ಸಹಾಯಕ: ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಸ್ಟೆನೋಗ್ರಾಫರ್ಸ್: ಪಿಯುಸಿ, ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್​ನ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಕಿರಿಯ ಸಹಾಯಕರು: ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು/
  • ಕಂಪ್ಯೂಟರ್ ಆಪರೇಟರ್: ಪಿಯುಸಿ, ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್​ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಚಾಲಕ, ಗುಂಪು ಡಿ: ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳಿಗೆ: ರೂ.1500/-
  • SC/ST ಅಭ್ಯರ್ಥಿಗಳಿಗೆ: ರೂ.750/-

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ, ನಿಗದಿತ ಅರ್ಹತಾ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.

ವೇತನ:

  • ಬ್ರಾಂಚ್ ಮ್ಯಾನೇಜರ್- ರೂ. 40900 ರಿಂದ 78200/-
  • ಹಿರಿಯ ಸಹಾಯಕ- ರೂ. 37900 ರಿಂದ 70850/-
  • ಸ್ಟೆನೋಗ್ರಾಫರ್ಸ್- ರೂ. 37900 ರಿಂದ 70850/-
  • ಕಂಪ್ಯೂಟರ್ ಆಪರೇಟರ್- ರೂ.30350 ರಿಂದ 58250/-
  • ಹಿರಿಯ ಸಹಾಯಕರು- ರೂ.30350 ರಿಂದ 58250/-
  • ಚಾಲಕ- ರೂ. 27650 ರಿಂದ 52650/-
  • ಗುಂಪು ಡಿ- ರೂ. 23500 ರಿಂದ 47650/-

ಪ್ರಮುಖ ದಿನಾಂಕ:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 28, 2023

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ