Bangalore Job Fair: ನಾಳೆ ಬೆಂಗಳೂರು ಉದ್ಯೋಗ ಮೇಳ, ಅರ್ಜಿ ಸಲ್ಲಿಸುವುದು ಹೇಗೆ?

|

Updated on: Sep 12, 2024 | 12:26 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಸೆಪ್ಟೆಂಬರ್ 13ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಆಕಾಂಕ್ಷಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾಡಳಿತ ತಿಳಿಸಿದೆ. ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಕೊಳ್ಳುವುದು ಹೇಗೆ? ಯಾರೆಲ್ಲ ಅರ್ಹರು? ಯಾವೆಲ್ಲ ಕಂಪನಿಗಳು ಭಾಗವಹಿಸಲಿವೆ ಇತ್ಯಾದಿ ವಿವರ ಇಲ್ಲಿದೆ.

Bangalore Job Fair: ನಾಳೆ ಬೆಂಗಳೂರು ಉದ್ಯೋಗ ಮೇಳ, ಅರ್ಜಿ ಸಲ್ಲಿಸುವುದು ಹೇಗೆ?
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ನಾಳೆ, ಅಂದರೆ ಸೆಪ್ಟೆಂಬರ್ 13ರಂದು ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ವಿಚಾರವಾಗಿ ಕರ್ನಾಟಕ ಸರ್ಕಾರ ಈಗಾಗಲೇ ಜಾಹೀರಾತು ಕೂಡ ಪ್ರಕಟಿಸಿದ್ದು, ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆದುಕೊಳ್ಳುವಂತೆ ಸೂಚಿಸಿದೆ.

ಎಷ್ಟು ಗಂಟೆಗೆ ಉದ್ಯೋಗ ಮೇಳ?

ದೇವನಹಳ್ಳಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಯಾರಿಗೆಲ್ಲ ಅವಕಾಶ?

ಉದ್ಯೋಗಮೇಳದಲ್ಲಿ 50 ಕ್ಕಿಂತ ಹೆಚ್ಚು ನಿಯೋಜಕರು/ ಕಂಪನಿಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವವರಿದ್ದಾರೆ. ಎಸ್.ಎಸ್.ಎಲ್.ಸಿ. ಪಿಯುಸಿ, ಐಬಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಸ್ವ-ವಿವರಗಳ (ಬಯೋಡಾಟಾ) ಗಳೊಂದಿಗೆ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ಕರ್ನಾಟಕ ಸರ್ಕಾರದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಗೆ ಸಲಹೆಗಾರರು ಬೇಕಂತೆ, ತಡವೇಕೆ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

ಉದ್ಯೋಗ ಮೇಳಕ್ಕೆ ನೋಂದಣಿ ಹೇಗೆ?

ಅಭ್ಯರ್ಥಿಗಳು https://bangalorerural.nic.in/en/job-fair/ ವೆಬ್​ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಜತೆಗೆ, ಅಭ್ಯರ್ಥಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡಿಯೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Thu, 12 September 24