Bank jobs 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಬ್ಯಾಂಕ್ ಆಫ್ ಇಂಡಿಯಾ (BOI) ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ತನ್ನ ಶಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆಸಕ್ತ ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವ ಬ್ಯಾಂಕ್ನಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ, ಹಾಗೆಯೇ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಈ ಕೆಳಗಿನಂತಿವೆ…
SBI SCO ನೇಮಕಾತಿ 2021:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಡಿಸೆಂಬರ್ 24, 2021 ರಿಂದ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ 13 ಜನವರಿ 2022 ರವರೆಗೆ ಅಧಿಕೃತ ವೆಬ್‌ಸೈಟ್ sbi.co.in ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲಿ ಒಟ್ಟು 7 ಖಾಲಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
BOI ನೇಮಕಾತಿ 2021:
ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಡಿಸೆಂಬರ್ 24, 2021 ರಿಂದ ಶುರುವಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofindia.co.in ಮೂಲಕ ಜನವರಿ 7, 2022 ರವರೆಗೆ ಅರ್ಜಿ ಸಲ್ಲಿಸಬಹುದು. ಇಲ್ಲಿ ಒಟ್ಟು 25 ಖಾಲಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ಪೆಷಲಿಸ್ಟ್ ಸಕ್ಯುರಿಟಿ ಆಫೀಸರ್ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
UBI ನೇಮಕಾತಿ 2021:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಈ ಪೋಸ್ಟ್‌ಗಳಿಗೆ ಜನವರಿ 7 ರವರೆಗೆ ಅಧಿಕೃತ ವೆಬ್‌ಸೈಟ್ Unionbankofindia.co.in ಮೂಲಕ ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳ ಒಟ್ಟು 25 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…
ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ
(Bank Jobs 2022: Latest Banking Recruitment)