Bank Jobs 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಕೆಲ ಹುದ್ದೆಗಳಿಗೆ ಅರ್ಜಿ ಆಹ್ವಾನ
Bank Jobs 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ವಯೋಮಿತಿ ಎಷ್ಟು ಎಂಬಿತ್ಯಾದಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
Central Bank of India Recruitment 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಕೆಲ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ 4 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ centralbankofindia.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ವಯೋಮಿತಿ ಎಷ್ಟು ಎಂಬಿತ್ಯಾದಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಬಿಸಿನೆಸ್ ಕರೆಸ್ಪಾಡೆಂಟ್ ಸುಪ್ರೈಸರ್: 4 ಹುದ್ದೆಗಳು (ರಾಯಪುರ್-1, ಬಿಲಾಸ್ಪುರ್-1, ದುರ್ಗ್-1 ಮತ್ತು ಜಗದಲ್ಪುರ್-1)
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪದವೀಧರರಾಗಿರಬೇಕು. M. Sc, BE (IT)/ MCA/MBA ಗೆ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು (MS ಆಫೀಸ್, ಇಮೇಲ್, ಇಂಟರ್ನೆಟ್ ಇತ್ಯಾದಿ) ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21 ರಿಂದ 45 ವರ್ಷದೊಳಗಿರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಪ್ರಕ್ರಿಯೆಯ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ.
ಗುತ್ತಿಗೆ ಒಪ್ಪಂದದ ಅವಧಿ:
ಈ ನೇಮಕಾತಿಯು ಗುತ್ತಿಗೆ ಒಪ್ಪಂದದ ಅಡಿಯಲ್ಲಿ ನಡೆಯಲಿದ್ದು, ಅದರಂತೆ ಈ ಒಪ್ಪಂದವು 12 ತಿಂಗಳವರೆಗೆ ಇರಲಿದೆ.
ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 8, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕೂಡ ಕಳುಹಿಸಬಹುದು.
ಅರ್ಜಿ ಕಳುಹಿಸಬೇಕಾದ ವಿಳಾಸ:
Regional Head, Central Bank of India, Regional Office, 1st floor, Bombay Market, G.E. Road, Raipur-492001(C.G.)
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 2:31 pm, Wed, 29 March 23