Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾದ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿ ಅಡಿಯಲ್ಲಿ ಡಿಜಿಟಲ್ ಬ್ಯುಸಿನೆಸ್, ಬ್ಯುಸಿನೆಸ್ ಮ್ಯಾನೇಜರ್, ಲೀಡ್ ಅನಾಲಿಸ್ಟ್, ಸ್ಪೆಷಲಿಸ್ಟ್, ಡಾಟಾ ಇಂಜಿನಿಯರ್, ಕ್ರಿಯೇಟಿವ್ ಇಂಜಿನಿಯರ್, ಪ್ರಾಡಕ್ಟ್ ಮ್ಯಾನೇಜರ್ ಸೇರಿದಂತೆ ಒಟ್ಟು 72 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್ಸೈಟ್ Bank of Baroda Recruitment ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಪದವೀಧರರು ಅರ್ಜಿ ಸಲ್ಲಿಸಬಹುದು. ಇನ್ನು ಬಿಇ, ಬಿ.ಟೆಕ್, ಎಂಬಿಎ ಮಾಡಿದವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 24 ವರ್ಷ ಆಗಿರಬೇಕು. ಹಾಗೆಯೇ ಗರಿಷ್ಠ ವಯೋಮಿತಿ 45 ವರ್ಷಗಳು.
ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 11, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.