Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾದ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jun 19, 2022 | 8:30 PM

Bank of Baroda Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾದ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ
Bank of Baroda Recruitment 2022
Follow us on

Bank of Baroda Recruitment 2022: ಬ್ಯಾಂಕ್ ಆಫ್ ಬರೋಡಾ ಗುತ್ತಿಗೆ ಆಧಾರದ ಮೇಲೆ ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನುಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 14

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಪ ಉಪಾಧ್ಯಕ್ಷ-ಡೇಟಾ ಸೈಂಟಿಸ್ಟ್ ಹುದ್ದೆಗಳು: 2
ಸಹಾಯಕ ಉಪಾಧ್ಯಕ್ಷ – ಡೇಟಾ ಸೈಂಟಿಸ್ಟ್ ಹುದ್ದೆಗಳು: 6
ಉಪ ಉಪಾಧ್ಯಕ್ಷ-ಡೇಟಾ ಇಂಜಿನಿಯರ್ ಹುದ್ದೆಗಳು: 2
ಸಹಾಯಕ ಉಪಾಧ್ಯಕ್ಷ – ಡೇಟಾ ಇಂಜಿನಿಯರ್ ಹುದ್ದೆಗಳು: 4

ಹುದ್ದೆಗಳ ಹೆಸರು: ಡೇಟಾ ಸೈಂಟಿಸ್ಟ್, ಡೇಟಾ ಇಂಜಿನಿಯರ್ ಹುದ್ದೆಗಳು

ವಯೋಮಿ ಮಿತಿ: ಅಭ್ಯರ್ಥಿಗಳು 25 ರಿಂದ 35 ವರ್ಷ ವಯಸ್ಸಿನವರಾಗಿರಬೇಕು.

ವಿದ್ಯಾರ್ಹತೆಗಳು: ಹುದ್ದೆಗೆ ಅನುಗುಣವಾಗಿ ಸಂಬಂಧಿತ ವಿಷಯಗಳಲ್ಲಿ ಕನಿಷ್ಠ 60% ಅಂಕಗಳೊಂದಿಗೆ BTech / BE / MTech / ME / IT ಪದವಿ ಉತ್ತೀರ್ಣರಾಗಿರಬೇಕು. ಹಾಗೆಯೇ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ಅನುಭವವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ / ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ:
ಸಾಮಾನ್ಯ / EWS / OBC ಅಭ್ಯರ್ಥಿಗಳಿಗೆ: ರೂ.600
SC / ST / PWD / ಮಹಿಳಾ ಅಭ್ಯರ್ಥಿಗಳಿಗೆ: ರೂ. 100

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 7, 2022.

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:30 pm, Sun, 19 June 22