Bank of Baroda Recruitment 2024 : ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 02, 2024 | 6:04 PM

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿಯಿದ್ದು , ಕೆಲಸ ಹುಡುಕುತ್ತಿದ್ದರೆ ಅಂತಹವರಿಗಾಗಿಯೇ ಸುವರ್ಣವಕಾಶವೊಂದು ಒದಗಿ ಬಂದಿದೆ. ಇದೀಗ ಬ್ಯಾಂಕ್‌ ಆಫ್‌ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಸಲ್ಲಿಸ ಬಹುದಾಗಿದೆ. ಈ ಖಾಲಿಯಿರುವ ಹುದ್ದೆಗಳ ವಿವರ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಸೇರಿದಂತೆ ವಿವಿಧ ಮಾಹಿತಿಯು ಇಲ್ಲಿದೆ.

Bank of Baroda Recruitment 2024 : ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Follow us on

ಬ್ಯಾಂಕ್ ಆಫ್ ಬರೋಡಾ 592 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಣಕಾಸು, ಎಂಎಸ್‌ಎಂಇ ಬ್ಯಾಂಕಿಂಗ್, ಡಿಜಿಟಲ್ ಗ್ರೂಪ್, ರಿಸೀವಬಲ್ಸ್ ಮ್ಯಾನೇಜ್ಮೆಂಟ್, ಮಾಹಿತಿ ತಂತ್ರಜ್ಞಾನ ಮತ್ತು ಕಾರ್ಪೊರೇಟ್ ಮತ್ತು ಸಾಂಸ್ಥಿಕ ಕ್ರೆಡಿಟ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿಯಿದ್ದು, ಆಸಕ್ತರು ನವೆಂಬರ್ ತಿಂಗಳ 19 ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

* ಬಿಇ, ಬಿ.ಟೆಕ್, ಸಿಎ, ಎಂಬಿಎ, ಇತರೆ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.

* ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22ರಿಂದ 45 ವರ್ಷದೊಳಗಿನವರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

* ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆಯಿದೆ. ಅದಲ್ಲದೇ, ಹುದ್ದೆಗಳ ವಿವರ, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಇನ್ನಿತ್ತರ ಮಾಹಿತಿಗಾಗಿ ಬ್ಯಾಂಕ್‌ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಆಯ್ಕೆ ವಿಧಾನಗಳು

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ, ಲಿಖಿತ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲಿಸಿ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಅರ್ಜಿ ಶುಲ್ಕ

ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್: ರೂ. 600/-

ಎಸ್ಟಿ/ಎಸ್ಸಿ/ಅಂಗವಿಕಲ/ಮಹಿಳೆ: ರೂ. 100/-

ಪ್ರಮುಖ ದಿನಾಂಕಗಳು

* ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಅಕ್ಟೋಬರ್ 30, 2024

* ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19-11-2024

* ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : ನವೆಂಬರ್ 19, 2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ