ಬ್ಯಾಂಕ್ ಆಫ್ ಬರೋಡಾದಲ್ಲಿ 1267 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Dec 30, 2024 | 5:37 PM

Bank of Baroda Recruitment 2025: ಬ್ಯಾಂಕ್ ಆಫ್ ಬರೋಡಾ ವಿವಿಧ ಇಲಾಖೆಗಳಲ್ಲಿ 1, 267 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸಕ್ತಿಯಿರುವವರು ಜನವರಿ 17, 2025 ರೊಳಗೆ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಆದರೆ ದೇಶದ ಪ್ರತಿಷ್ಠಿತ ಈ ಬ್ಯಾಂಕ್ ನಲ್ಲಿ ಯಾವೆಲ್ಲಾ ಹುದ್ದೆಗಳು ಖಾಲಿಯಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗೆ ಇರಬೇಕಾದ ಅರ್ಹತಾ ಮಾನದಂಡಗಳೇನು? ಎನ್ನುವ ಮಾಹಿತಿ ಇಲ್ಲಿದೆ.

ಬ್ಯಾಂಕ್ ಆಫ್ ಬರೋಡಾದಲ್ಲಿ 1267 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
ಬ್ಯಾಂಕ್ ಆಫ್ ಬರೋಡಾ
Follow us on

ದೇಶದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿಯಿರುವ 1,267 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಆಫೀಸರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಮ್ಯಾನೇಜರ್‌, ಮ್ಯಾನೇಜರ್‌-ಸೇಲ್ಸ್‌ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾಗಿರುವ ಅಭ್ಯರ್ಥಿಗಳು ಜನವರಿ 17 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

* ಇಲಾಖೆಯ ಹೆಸರು : ಬ್ಯಾಂಕ್ ಆಫ್ ಬರೋಡಾ

* ಹುದ್ದೆಗಳ ಹೆಸರು : ಸ್ಪೆಷಲಿಸ್ಟ್ ಆಫೀಸರ್, ಮ್ಯಾನೇಜರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಆಫೀಸರ್‌, ಅಗ್ರಿಕಲ್ಚರ್‌ ಮಾರ್ಕೆಟಿಂಗ್‌ ಮ್ಯಾನೇಜರ್‌, ಮ್ಯಾನೇಜರ್‌-ಸೇಲ್ಸ್‌ ಸೇರಿದಂತೆ ವಿವಿಧ ಹುದ್ದೆಗಳು .

* ಒಟ್ಟು ಹುದ್ದೆಗಳು : 1,267

ಅಭ್ಯರ್ಥಿಗೆ ಇರಬೇಕಾದ ವಿದ್ಯಾರ್ಹತೆ:

* ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ, ಬಿ.ಇ, ಬಿ.ಟೆಕ್‌, ಎಂಸಿಎ, ಎಂ.ಎಸ್‌ಸಿ, ಪಿಜಿಡಿಎಂ ಪೂರ್ಣಗೊಳಿಸಿರಬೇಕು.

ವಯೋಮಿತಿ

* ಬ್ಯಾಂಕ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಹಾಗೂ ಗರಿಷ್ಠ ವಯಸ್ಸು 45 ವರ್ಷ ದಾಟಿರಬಾರದು. ಮೀಸಲಾತಿಗೆ ಅನುಗುಣವಾಗಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ

* ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 600 ರೂ ಹಾಗೂ ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಹಾಗೂ ಮಹಿಳಾ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 18 ಡಿಸೆಂಬರ್ 2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಜನವರಿ 2025

ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:35 pm, Mon, 30 December 24