ಬಸವೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Bank Recruitment 2023: ಬಸವೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 18 ರಿಂದ 35 ವರ್ಷಗಳ ಒಳಗಿರಬೇಕು. ಈ ನೇಮಕಾತಿ ಅಡಿಯಲ್ಲಿ ಜೂನಿಯರ್ ಅಸಿಸ್ಟೆಂಟ್, ಪ್ಯೂನ್/ನೈಟ್ ವಾಚ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಬಸವೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ನಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಜೂನಿಯರ್ ಅಸಿಸ್ಟೆಂಟ್, ಪ್ಯೂನ್/ನೈಟ್ ವಾಚ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 4 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಅನ್ವಯಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಬ್ಯಾಂಕ್ ಹೆಸರು : ಬಸವೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್
- ಒಟ್ಟು ಹುದ್ದೆಗಳ ಸಂಖ್ಯೆ: 7 ಹುದ್ದೆಗಳು
- ಉದ್ಯೋಗ ಸ್ಥಳ: ಬಾಗಲಕೋಟ – ಕರ್ನಾಟಕ
- ಪೋಸ್ಟ್ ಹೆಸರು: ಜೂನಿಯರ್ ಅಸಿಸ್ಟೆಂಟ್, ಪ್ಯೂನ್ / ನೈಟ್ ವಾಚ್‌ಮ್ಯಾನ್
ಹುದ್ದೆಗಳ ವಿಭಾಗವಾರು ಮಾಹಿತಿ:
- ಜೂನಿಯರ್ ಅಸಿಸ್ಟೆಂಟ್- 1 ಹುದ್ದೆ
- ಪ್ಯೂನ್/ನೈಟ್ ವಾಚ್‌ಮ್ಯಾನ್- 6 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
- ಜೂನಿಯರ್ ಅಸಿಸ್ಟೆಂಟ್- ಪಿಯುಸಿ
- ಪ್ಯೂನ್/ನೈಟ್ ವಾಚ್‌ಮ್ಯಾನ್- ಎಸ್ಎಸ್ಎಲ್ಸಿ
ವಯೋಮಿತಿ:
ಬಸವೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 18 ರಿಂದ 35 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
- SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು
- OBC ಅಭ್ಯರ್ಥಿಗಳಿಗೆ: 03 ವರ್ಷಗಳು
ಅರ್ಜಿ ಶುಲ್ಕ:
- SC/ST/Cat-I ಅಭ್ಯರ್ಥಿಗಳು: ರೂ.250/-
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳು: ರೂ.500/-
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದು.
ಮಾಸಿಕ ವೇತನ:
- ಜೂನಿಯರ್ ಅಸಿಸ್ಟೆಂಟ್- ರೂ.21400 ರಿಂದ ರೂ.42000/-
- ಪ್ಯೂನ್/ನೈಟ್ ವಾಚ್‌ಮ್ಯಾನ್- ರೂ.21400 ರಿಂದ ರೂ. 42000/-
ಇದನ್ನೂ ಓದಿ: SCDCC ಬ್ಯಾಂಕ್ ನೇಮಕಾತಿ: 125 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-ಸೆಪ್ಟೆಂಬರ್-2023
ಅರ್ಜಿ ಕಳುಹಿಸಬೇಕಾದ ವಿಳಾಸ:
Member Staff Recruitment & Manager, Basaveshwara Co-operative Bank Limited, Parthanahalli Complex, Opposite to Bhagat Singh Complex, 1st Floor, Theatre Road, Jamakhandi-587301, Bagalkot, Karnataka.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.