AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

BBMP Recruitment 2022: ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವಿಭಾಗದ ಅಭ್ಯರ್ಥಿಗಳಿಗೆ (2ಎ, 2ಬಿ, 3ಎ, 3ಬಿ) 38 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

BBMP Recruitment 2022: 'ನಮ್ಮ ಕ್ಲಿನಿಕ್'​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 25, 2022 | 8:15 AM

Share

ಬೃಹತ್‌ ಬೆಂಗಳೂರು ನಗರ ಪಾಲಿಕೆಯು (ಬಿಬಿಎಂಪಿ) ಆರಂಭಿಸುತ್ತಿರುವ ನಮ್ಮ ಕ್ಲಿನಿಕ್​ನಲ್ಲಿ ಕಾರ್ಯ ನಿರ್ವಹಿಸಲು ವೈದ್ಯರು, ಶುಶ್ರೂಷಕಿಯರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿ  ಬೆಂಗಳೂರಿನಲ್ಲಿ ಹೊಸ ಸೇವೆಯನ್ನು ಪ್ರಾರಂಭಿಸುತ್ತಿದೆ. ಇದಕ್ಕಾಗಿ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ನಾಲ್ಕನೇ ದರ್ಜೆ ನೌಕರರು ಸೇರಿದಂತೆ ಒಟ್ಟು 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಂದರೆ ಇಲ್ಲಿ ಆಯಾ ವಿಭಾಗದಲ್ಲಿ ತಲಾ 8 ಮಂದಿಯನ್ನು ನೇಮಕ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಆಯ್ಕೆ ಪ್ರಕ್ರಿಯೆ ಹೇಗೆ? ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಈ ನೇಮಕಾತಿಯು ಒಂದು ವರ್ಷದ ಗುತ್ತಿಗೆ ಒಪ್ಪಂದೊಂದಿಗೆ ಇರಲಿದೆ. ಇನ್ನು ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಹತಾ ಮಾನದಂಡಗಳು: ಆಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಪರಿಣಿತರಾಗಿರಬೇಕು. ಅಲ್ಲದೆ ಎಲ್ಲಾ ರೀತಿಯ ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ಹೊಂದಿರಬೇಕಾಗುತ್ತದೆ.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವಿಭಾಗದ ಅಭ್ಯರ್ಥಿಗಳಿಗೆ (2ಎ, 2ಬಿ, 3ಎ, 3ಬಿ) 38 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹಾಗೆಯೇ ಪರಿಶಿಷ್ಠ ಜಾತಿ, ಪ.ಪಂಗಡ, ವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ.

ಸ್ಥಳೀಯರಿಗೆ ಅವಕಾಶ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಹಾಗೂ ನಾಲ್ಕನೇ ದರ್ಜೆಯ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಗೊತ್ತಿರಬೇಕಿರುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತರು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಆ ಬಳಿಕ ಅದನ್ನು ಭರ್ತಿ ಮಾಡಬೇಕು. ಈ ಅರ್ಜಿಯೊಂದಿಗೆ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22975516 ಅನ್ನು ಸಂಪರ್ಕಿಸಿ. ಹಾಗೆಯೇ ಈಮೇಲ್ ಐಡಿ  choph515@gmail.com ಮೂಲಕ ಕೂಡ ಮಾಹಿತಿ ಪಡೆಯಬಹುದು. ಇದಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವೆಬ್‌ಸೈಟ್ www.bbmp.gov.in ಭೇಟಿ ನೀಡುವ ಹೆಚ್ಚಿನ ಮಾಹಿತಿಯನ್ನು ಕಲೆಹಾಕಬಹುದು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್