
ಬೆಂಗಳೂರು ಸಿಟಿ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಅಸಿಸ್ಟೆಂಟ್‌ಗಳು, ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 10 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
| ಪೋಸ್ಟ್ ಹೆಸರು | ಪೋಸ್ಟ್‌ಗಳ ಸಂಖ್ಯೆ | ಅರ್ಹತೆ |
| ಜೂನಿಯರ್ ಅಸಿಸ್ಟೆಂಟ್ | 62 | ಪದವಿ |
| ಅಟೆಂಡರ್ | 12 | 10 ನೇ ತರಗತಿ |
ಬೆಂಗಳೂರು ನಗರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಅದೇ ಸಮಯದಲ್ಲಿ, SC ಮತ್ತು ST ವರ್ಗಕ್ಕೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ ಮತ್ತು OBC ಗೆ 3 ವರ್ಷಗಳ ಸಡಿಲಿಕೆ ನೀಡಲಾಗಿದೆ.
ಇದನ್ನೂ ಓದಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ; 500ರಕ್ಕೂ ಹೆಚ್ಚು ನೇಮಕಾತಿ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ