AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDL Recruitment 2025: ಭಾರತ್ ಡೈನಾಮಿಕ್ಸ್ ಲಿಮಿಟೆಡ್​​ನಲ್ಲಿ 80 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) 80 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಸರ್ಕಾರಿ ಉದ್ಯೋಗಾವಕಾಶದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಮತ್ತು ತಿಂಗಳಿಗೆ ಸಂಬಳದ ವಿವರಗಳನ್ನು ಇಲ್ಲಿ ಒದಗಿಸಲಾಗಿದೆ. ಆಸಕ್ತರು ಡಿಸೆಂಬರ್ 29ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಅಧಿಸೂಚನೆಯನ್ನು ಓದಿ.

BDL Recruitment 2025: ಭಾರತ್ ಡೈನಾಮಿಕ್ಸ್ ಲಿಮಿಟೆಡ್​​ನಲ್ಲಿ 80 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ
ಭಾರತ್ ಡೈನಾಮಿಕ್ಸ್ ಲಿಮಿಟೆಡ್​​
ಅಕ್ಷತಾ ವರ್ಕಾಡಿ
|

Updated on: Nov 28, 2025 | 5:21 PM

Share

ಭಾರತ್ ಡೈನಾಮಿಕ್ಸ್ ಲಿಮಿಟೆಡ್(BDL) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಡಿಸೆಂಬರ್ 29ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

BDL ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL)
  • ಹುದ್ದೆಗಳ ಸಂಖ್ಯೆ: 80
  • ಉದ್ಯೋಗ ಸ್ಥಳ: ಭಾರತದಾದ್ಯಂತ
  • ಹುದ್ದೆ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ
  • ಸಂಬಳ: ತಿಂಗಳಿಗೆ40,000 – 1,40,000 ರೂ.

ಶೈಕ್ಷಣಿಕ ಅರ್ಹತೆ:

ಬಿಡಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿಎ, ಐಸಿಡಬ್ಲ್ಯುಎಐ, ಪದವಿ, ಬಿಇ/ ಬಿ.ಟೆಕ್, ಎಂಬಿಎ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25-11-2025 ರಂತೆ 27 ವರ್ಷಗಳು. ಆದರೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC, ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್​​ ನ್ಯೂಸ್​; ಹೀಗೆ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:

ಯುಆರ್/ ಇಡಬ್ಲ್ಯೂಎಸ್/ ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 500 ರೂ. ಹಾಗೂ SC/ ST/ PwBD/ ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ ಬಿಡಿಎಲ್ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಅರ್ಜಿ ಸಲ್ಲಿಸಲು ಬಿಡಿಎಲ್​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
  • ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯಿಸಿದರೆ) ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್