
ಭಾರತ್ ಡೈನಾಮಿಕ್ಸ್ ಲಿಮಿಟೆಡ್(BDL) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಡಿಸೆಂಬರ್ 29ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಬಿಡಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿಎ, ಐಸಿಡಬ್ಲ್ಯುಎಐ, ಪದವಿ, ಬಿಇ/ ಬಿ.ಟೆಕ್, ಎಂಬಿಎ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25-11-2025 ರಂತೆ 27 ವರ್ಷಗಳು. ಆದರೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC, ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯಿದೆ.
ಇದನ್ನೂ ಓದಿ: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್; ಹೀಗೆ ಅರ್ಜಿ ಸಲ್ಲಿಸಿ
ಯುಆರ್/ ಇಡಬ್ಲ್ಯೂಎಸ್/ ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 500 ರೂ. ಹಾಗೂ SC/ ST/ PwBD/ ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ